ಮನೆ ರಾಜ್ಯ ಪರಿಹಾರ ಪಾವತಿಗೆ ಬಾಕಿ ಇರುವ ಪ್ರಕರಣಗಳ ತಕ್ಷಣ ಪಾವತಿಸಲು ಜಿಲ್ಲಾಧಿಕಾರಿ ಸೂಚನೆ

ಪರಿಹಾರ ಪಾವತಿಗೆ ಬಾಕಿ ಇರುವ ಪ್ರಕರಣಗಳ ತಕ್ಷಣ ಪಾವತಿಸಲು ಜಿಲ್ಲಾಧಿಕಾರಿ ಸೂಚನೆ

0

Join Our Whatsapp Group

ಮೈಸೂರು : ಜು. 07 ಪೂರ್ವ ಮುಂಗಾರು ಮತ್ತು ಮುಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದ ಸಂಭವಿಸಿರುವ ಹಾನಿ ಹಾಗೂ ಸರ್ಕಾರದ ಮಾರ್ಗಸೂಚಿ ಅನುಸಾರ ಪರಿಹಾರ ಪಾವತಿ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ, ಪರಿಹಾರ ಪಾವತಿಗೆ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣವೇ ಪರಿಹಾರ ಪಾವತಿಸುವಂತೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

ನಂಜನಗೂಡಿನಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಕೆಲಸಗಳಿಗೆ ಅಡಚಣೆಯಾಗದಂತೆ ಜಿಲ್ಲೆಯ ಎಲ್ಲಾ ಉಪತಹಸೀಲ್ದಾರರು, ರಾಜಸ್ವ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು, ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳದಿಂದ ಗೂಗಲ್ ಮೀಟ್ ಮೂಲಕ ಜಿಲ್ಲಾ ಮಟ್ಟದ ಕಂದಾಯಧಿಕಾರಿಗಳ ಸಭೆಯಲ್ಲಿ ನಡೆಯಿತು.

ಕೆರೆಗಳ ಒತ್ತುವರಿ ಗುರುತಿಸಲು ಆಯಾ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಮೊದಲಿಗೆ 10 ಎಕರೆಗೆ ಮೀರಿದ ಕೆರೆ ಪ್ರದೇಶದ ಒತ್ತುವರಿ ಗುರುತಿಸಿ ತೆರವು ಮಾಡಲು ತಹಸೀಲ್ದಾರರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸರ್ಕಾರಿ ಜಮೀನುಗಳಲ್ಲಿರುವ ಒತ್ತುವರಿಗಳನ್ನು ಗುರುತಿಸಿ ತೆರವು ಮಾಡಲು, ಜನಸಂಖ್ಯೆಗೆ ಅನುಗುಣವಾಗಿ ಸ್ಮಶಾನ ಜಮೀನು ಲಭ್ಯಪಡಿಸಲು ಸೂಚಿನೆ ನೀಡಲಾಯಿತು. ಭೂಮಿ ತಂತ್ರಾಂಶದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಆಧ್ಯತೆ ಮೀರಿ ಇತ್ಯರ್ಥಪಡಿಸಲು ಸೂಚನೆ ನೀಡಲಾಯಿತು. ಅವಧಿ ಮೀರಿ ಬಾಕಿ ಉಳಿಸಿಕೊಂಡಿರುವ ಅರ್ಜಿಗಳಿಗೆ ಸಂಬಂಧಪಟ್ಟಂತೆ ನೇರವಾಗಿ ಕಂದಾಯ ನಿರೀಕ್ಷಕರಿಗೆ ವಿಚಾರಿಸಿ ಎಚ್ಚರಿಕೆ ನೀಡಿ ತಕ್ಷಣವೇ ಇತ್ಯರ್ಥಕ್ಕೆ ಕ್ರಮವಹಿಸುವಂತೆ ತಿಳಿಸಿದರು.

ಕಂದಾಯ ವಿಷಯಗಳಲ್ಲಿ ಆಡಳಿತಾತ್ಮಕ ದೃಷ್ಟಿಯಲ್ಲಿ ಕೆಲವೊಮ್ಮೆ ಸಾರ್ವಜನಿಕರ ಸಮಸ್ಯೆ ಇತ್ಯರ್ಥಪಡಿಸಲು ಸಮಯಾವಕಾಶ ಅವಶ್ಯಕವಾಗಿದ್ದು, ಆದರೆ ಸಾಮಾಜಿಕ ಭದ್ರತೆ ಯೋಜನೆಯಡಿ ಮಂಜೂರು ಮಾಡುವ ಪಿಂಚಣಿ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ಕ್ರಮಕೈಗೊಳ್ಳಲು ಸೂಚನೆ ನೀಡಲಾಯಿತು. ಆಧಾರ್ ಲಿಂಕ್ ಆಗದ ಕಾರಣ ಪಿಂಚಣಿ ತಡೆಹಿಡಿದಿರುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳು ಅಂತಹ ವಂಚಿತ ಫಲಾನುಭವಿಗಳನ್ನು ಖುದ್ದಾಗಿ ಸಂಪರ್ಕಿಸಿ ದಾಖಲೆಗಳನ್ನು ಪಡೆದು ಪಿಂಚಣಿಗಳನ್ನು ಮರುಸ್ಥಾಪಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು, ಭೂ ದಾಖಲೆಗಳ ಉಪ ನಿರ್ದೇಶಕರು, ಉಪವಿಭಾಗಾಧಿಕಾರಿ-ಮೈಸೂರು ಮತ್ತು ಹುಣಸೂರು, ಜಿಲ್ಲೆಯ ಎಲ್ಲಾ ತಾಲ್ಲೂಕು ತಹಸೀಲ್ದಾರರು, ಸಹಾಯಕ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು.

ಹಿಂದಿನ ಲೇಖನಯೂಟ್ಯೂಬ್​ ನಲ್ಲಿ ಬಿಡುಗಡೆ ಆಗುತ್ತಿದೆ ‘ಸಾವಿತ್ರಿ’ ಸಿನಿಮಾ
ಮುಂದಿನ ಲೇಖನಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್ ಎಂದ ಹೆಚ್.ಡಿ.ಕುಮಾರಸ್ವಾಮಿ