ಮನೆ ಸುದ್ದಿ ಜಾಲ ಮದ್ದೂರು ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಡಾ. ಕುಮಾರ

ಮದ್ದೂರು ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಡಾ. ಕುಮಾರ

0

ಮಂಡ್ಯ: ಜಿಲ್ಲಾಧಿಕಾರಿ ಡಾ:ಕುಮಾರ ಅವರು ಮದ್ದೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಕಚೇರಿ ಕೆಲಸಗಳನ್ನು ಪರಿಶೀಲಿಸಿದರು.

Join Our Whatsapp Group


ತಾಲ್ಲೂಕು ಕಚೇರಿಯಲ್ಲಿ ನಿಗಧಿಪಡಿಸಿರುವ ಕಾಲಾವಧಿಯಲ್ಲಿ ಸಾರ್ವಜನಿಕರ ಕೆಲಸಗಳನ್ನು ‌ಪಾರದರ್ಶಕವಾಗಿ ಮಾಡಿಕೊಡಬೇಕು.ವಿಳಂಬ ಮಾಡುವುದು, ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬಾರದು ಎಂದು ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಸಾರ್ವಜನಕರಿಂದ ಖುದ್ದು ಅರ್ಜಿಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಒದಗಿಸಿದರು.
ನಂತರ ಮದ್ದೂರು ತಾಲ್ಲೂಕು ಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳ ಮತ್ತು ಬೋಧಕ ಸಿಬ್ಬಂದಿಗಳೊಂದಿಗೆ ಚರ್ಚಿಸಿದರು.
ಪರಿಶೀಲನೆ ವೇಳೆ ಮದ್ದೂರು ತಾಲ್ಲೂಕು ತಹಶೀಲ್ದಾರ್ ನರಸಿಂಹಮೂರ್ತಿ ಉಪಸ್ಥಿತರಿದ್ದರು.