ಮನೆ ಸುದ್ದಿ ಜಾಲ ರಾಂಚಿಯಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸೇನಾ ಯೋಧ ಬಂಧನ

ರಾಂಚಿಯಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸೇನಾ ಯೋಧ ಬಂಧನ

0

ರಾಂಚಿ: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 38 ವರ್ಷದ ಸೇನಾ ಯೋಧನನ್ನು ಜಾರ್ಖಂಡ್ ರಾಜ್ಯದ ರಾಂಚಿ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಘಟನೆ ಶುಕ್ರವಾರ  ಲಾಲ್‌ಪುರ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 23 ವರ್ಷದ ಯುವತಿ ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಸಂತ್ರಸ್ತೆಯ ಹೇಳಿಕೆ ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಲಾಲ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ರೂಪೇಶ್ ಕುಮಾರ್ ತಿಳಿಸಿದ್ದಾರೆ.

ಮತ್ತೊಬ್ಬ ಅಧಿಕಾರಿ ನೀಡಿದ ಮಾಹಿತಿಯ ಪ್ರಕಾರ, ಬಂಧಿತ ಸೇನಾ ಯೋಧ ಹರಿಯಾಣ ಮೂಲದವರಾಗಿದ್ದು, ರಾಂಚಿಯ ನಾಮ್ಕುಮ್ ಪ್ರದೇಶದಲ್ಲಿ ನಿಯೋಜಿತನಾಗಿದ್ದನು. ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.