ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಪ್ರವಾಸಿಗರ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವನ ಸ್ಥಿತಿ ಗಂಭೀರವಾದ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ಆ.12ರ ಶನಿವಾರ ನಡೆದಿದೆ.
ಬೆಂಗಳೂರಿನ ಕೋಣನಕುಂಟೆ ಮೂಲದ ಪೂಜಾ ಹಿರೇಮಠ್, ರಾಜಶೇಖರ್ ಹಿರೇಮಠ್ ಮೃತ ದುರ್ದೈವಿಗಳಾಗಿದ್ದು, ಶಿವಯಾಗಯ್ಯ ಹಿರೇಮಠ್ ಎಂಬವರ ಸ್ಥಿತಿ ಗಂಭೀರವಾಗಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಹಾಗೂ ಸಖಲೇಶಪುರದಿಂದ ಮೂಡಿಗೆರೆ ಕಡೆ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Saval TV on YouTube