ರಾಯ್ ಪುರ: ಟ್ರಕ್ ಹಾಗೂ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದ್ದು, 11 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಲೋಡಾ ಬಜಾರ್ – ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಪ್ರಯಾಣಿಕರೆಲ್ಲರೂ ಸಂಬಂಧಿಕರಾಗಿದ್ದು, ಗುರುವಾರ ತಡರಾತ್ರಿ ಕೌಟುಂಬಿಕ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Saval TV on YouTube