ಬೆಂಗಳೂರು(Bengaluru): ನನಗೆ ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ. ನಿಷ್ಕಳಂಕಿತನಾಗಿ ಹೊರಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಕುರಿತು ಪ್ರತಿಕ್ರಿಯಿಸಿರುವ ಅವರು, ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ಭರವಸೆ ಇದೆ, ನಿಷ್ಕಳಂಕಿತನಾಗಿ ಹೊರ ಬರುವ ವಿಶ್ವಾಸವೂ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.














