ಮನೆ ಸುದ್ದಿ ಜಾಲ ವಾಣಿಜ್ಯ ಬಳಕೆಯ ಸಿಲಿಂಡರ್ ದರ 91.50 ರೂ.ಕಡಿತ

ವಾಣಿಜ್ಯ ಬಳಕೆಯ ಸಿಲಿಂಡರ್ ದರ 91.50 ರೂ.ಕಡಿತ

0

ನವದೆಹಲಿ: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್‌ ದರ ಮಂಗಳವಾರ 91.50 ರೂ ಕಡಿತವಾಗಲಿದೆ ಎಂದು ಮೂಲಗಳ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ರಾಷ್ಟ್ರೀಯ ತೈಲ ಮಾರಾಟ ಕಂಪನಿಗಳು ಬೆಲೆ ಇಳಿಕೆ ನಿರ್ಧಾರ ಕೈಗೊಂಡಿವೆ ಎನ್ನಲಾಗಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬರುವ ಸಾಧ್ಯತೆಗಳಿವೆ. ಈ ತೀರ್ಮಾನದಿಂದ ದೆಹಲಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ.ಜಿ ಎಲ್‌ಪಿಜಿ ಸಿಲಿಂಡರ್‌ ದರ 1907 ಆಗಲಿದೆ.

ಇದನ್ನು ಓದಿ..2022-2023ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭ

ಹೊಸ ವರ್ಷದ ಮೊದಲ ದಿನದಂದು ವಾಣಿಜ್ಯ ಸಿಲಿಂಡರ್​ನ ಬೆಲೆಯನ್ನು ನೂರು ರೂಪಾಯಿಗಳ ಕಡಿತ ಮಾಡಲಾಗಿತ್ತು. ಈಗ ಸುಮಾರು 91 ರೂಪಾಯಿ ಕಡಿತಗೊಳಿಸಲಾಗಿದ್ದು, 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಹಿಂದಿನ ಲೇಖನ2022-2023ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭ
ಮುಂದಿನ ಲೇಖನಸಬ್ಸಿಡಿ ಬಿಡುಗಡೆಗೆ ಲಂಚ ಬೇಡಿಕೆ: ಜಂಟಿ ನಿರ್ದೇಶಕ, ಉಪನಿರ್ದೇಶಕಿ ಎಸಿಬಿ ಬಲೆಗೆ