ನವದೆಹಲಿ: ವಾಣಿಜ್ಯ ಬಳಕೆಯ 19 ಕೆ.ಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 41 ರೂ. ಇಳಿಕೆಯಾಗಿದ್ದು, ಬೆಲೆ ಏರಿಕೆಯಿಂದ ಕಂಗಾಲಾದ ಜನರಿಗೆ ಸಿಹಿ ಸುದ್ದಿಯೊಂದು ದೊರೆತಂತಾಗಿದೆ.
ಇಂದಿನಿಂದ ಹೊಸ ಹಣಕಾಸು ವರ್ಷ ಆರಂಭವಾಗುತ್ತಿದ್ದು, ಹಣಕಾಸು ನಿಯಮಗಳು, ದರ ಏರಿಕೆ, ಬ್ಯಾಂಕಿಂಗ್ ವಲಯಗಳಲ್ಲಿ ಹಲವು ಬದಲಾವಣೆಗಳಾಗುತ್ತಿವೆ. ಇದರೊಂದಿಗೆ ತೈಲ ಕಂಪನಿಗಳು 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 41 ರೂ. ಕಡಿಮೆ ಮಾಡಿದೆ. ಈ ಹೊಸ ಬೆಲೆ ಏ.2 ರಿಂದ ಜಾರಿಗೆ ಬರಲಿದೆ. ಇದಕ್ಕಿಂತ ಮುನ್ನ ಫೆ.1ರಂದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 7 ರೂ. ಕಡಿಮೆ ಮಾಡಲಾಗಿತ್ತು. ಕಳೆದ ಡಿಸೆಂಬರ್‌ನಲ್ಲಿ ಸಿಲಿಂಡರ್‌ಗಳ ಬೆಲೆಯನ್ನು 62 ರೂ.ಗೆ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೆ 41 ರೂ. ಇಳಿಕೆ ಮಾಡಲಾಗಿದೆ. ಇದರಿಂದಾಗಿ ರೆಸ್ಟೋರೆಂಟ್, ಹೋಟೆಲ್ ಮತ್ತು ವಾಣಿಜ್ಯ ಘಟಕಗಳಿಗೆ ಅನುಕೂಲಕರವಾಗಲಿದೆ.