ಮನೆ ಸ್ಥಳೀಯ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್

0

ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮುಡಾ ಆಯುಕ್ತ ಮನ್ಸೂರ್ ಅಲಿ ಟಿಡಿಆರ್​ ಕ್ಲಿಯರೆನ್ಸ್ ಮಾಡಲು 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು.

ಈ ವೇಳೆ ಡಿವೈಎಸ್​ಪಿ ಚೆಲುವರಾಜ್, ಇನ್ಸ್ಪೆಕ್ಟರ್​ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಅಧಿಕಾರಿಗಳು ದಿಢೀರ್​ ದಾಳಿ ಮಾಡಿ ಆಯುಕ್ತ ಮನ್ಸೂರ್​ ಅಲಿಯನ್ನು ರೆಡ್​ ಆ್ಯಂಡ್​ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ.

ಆಯುಕ್ತ ಮನ್ಸೂರ್​ ಅಲಿ ಜೊತೆ ಬ್ರೋಕರ್ ಸಲೀಂ ಎಂಬುವವರನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.