ಮನೆ ಕ್ರೀಡೆ ಕಾಮನ್‌ ವೆಲ್ತ್‌ ಕ್ರೀಡಾಕೂಡ: ಭಾರತದ ತುಲಿಕಾ ಮಾನ್ ಗೆ ಬೆಳ್ಳಿ, ಸೌರವ್ ಘೋಷಾಲ್ ಗೆ ಕಂಚು

ಕಾಮನ್‌ ವೆಲ್ತ್‌ ಕ್ರೀಡಾಕೂಡ: ಭಾರತದ ತುಲಿಕಾ ಮಾನ್ ಗೆ ಬೆಳ್ಳಿ, ಸೌರವ್ ಘೋಷಾಲ್ ಗೆ ಕಂಚು

0

ಬರ್ಮಿಂಗ್‌ ಹ್ಯಾಮ್‌ (Birmingham): ಕಾಮನ್‌ ವೆಲ್ತ್‌ ಗೇಮ್ಸ್‌ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಭಾರತದ ತುಲಿಕಾ ಮಾನ್, ಸೌರವ್ ಘೋಷಾಲ್ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕವನ್ನು ಜಯಿಸಿದ್ದಾರೆ.

ಮಹಿಳೆಯರ 78 ಕೆಜಿ ವಿಭಾಗದ ಜೂಡೋ ಸ್ಪರ್ಧೆಯಲ್ಲಿ ಭಾರತದ ತುಲಿಕಾ ಮಾನ್ ಅವರು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.ತುಲಿಕಾ ಮಾನ್ ಅವರು ಮಹಿಳೆಯರ +78 ಕೆಜಿ ವಿಭಾಗದ ಫೈನಲ್‌ನಲ್ಲಿ ಸ್ಕಾಟ್ಲೆಂಡ್‌ನ ಸಾರಾ ಅಡ್ಲಿಂಗ್ಟನ್ ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ. ಈ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಜೂಡೋದಲ್ಲಿ ಭಾರತಕ್ಕೆ ಇದು ಮೂರನೇ ಪದಕವಾಗಿದೆ.

ಸ್ಕ್ವಾಷ್​ನಲ್ಲಿ ಸೌರವ್ ಘೋಷಾಲ್ ಅವರು ಪುರುಷರ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಅವರು ಕಾಮನ್ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಸಿಂಗಲ್ಸ್ ನಲ್ಲಿ ಪದಕ ಗೆದ್ದ ಭಾರತದ ಮೊದಲ ಸ್ಕ್ವಾಷ್ ಆಟಗಾರಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಸ್ಕ್ವಾಷ್​ ಪಂದ್ಯದಲ್ಲಿ 35 ವರ್ಷದ ಸೌರವ್ ಘೋಷಾಲ್ ಅವರು ಆತಿಥೇಯ ಇಂಗ್ಲೆಂಡ್ ಆಟಗಾರ ಜೇಮ್ಸ್ ವಿಲ್‌ಸ್ಟ್ರೋಪ್ ಅವರನ್ನು 3-0 ಅಂತರದಿಂದ ಸೋಲಿಸುವ ಮೂಲಕ ಕಂಚಿನ ಪದಕ ಪಡೆದರು.

1998 ರಲ್ಲಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೊದಲ ಬಾರಿಗೆ ಸ್ಕ್ವಾಷ್ ಅನ್ನು ಸೇರಿಸಲಾಯಿತು. ಆದರೆ ಭಾರತ ಅದರಲ್ಲಿ ಕೇವಲ 4 ಪದಕಗಳನ್ನು ಮಾತ್ರ ಪಡೆದುಕೊಂಡಿದೆ. ಇದರಲ್ಲಿ ಕೊನೆಯ ಮೂರು ಪದಕಗಳು ಬಂದಿದ್ದು ಡಬಲ್ಸ್‌ನಲ್ಲಿ ಮಾತ್ರ. ಈಗ ಮೊದಲ ಬಾರಿಗೆ ಸಿಂಗಲ್ಸ್‌ನಲ್ಲಿ ಭಾರತಕ್ಕೆ ಪದಕ ಬಂದಿದೆ.

ಭಾರತ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಐದು ಚಿನ್ನ, ಆರು ಬೆಳ್ಳಿ ಹಾಗೂ ಐದು ಕಂಚು ಸಹಿತ 16 ಪದಕಗಳನ್ನು ಪಡೆದುಕೊಂಡಿದೆ.

ಹಿಂದಿನ ಲೇಖನತೋಳಿನ ಭಾಗದ ಬೊಜ್ಜು ಕರಗಿಸುವುದು ಹೇಗೆ?
ಮುಂದಿನ ಲೇಖನಇಂದಿನ ರಾಶಿ ಭವಿಷ್ಯ