ಬೆಂಗಳೂರು(Bengaluru): ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗಳಿಸಿರುವ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರ ₹ 15 ಲಕ್ಷ ನಗದು ಬಹುಮಾನವನ್ನು ಘೋಷಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ, ಭಾರತದ ಮಹಿಳಾ ಕ್ರಿಕೆಟ್ ತಂಡವು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಸಣ್ಣ ಅಂತರದಲ್ಲಿ ಚಿನ್ನದ ಪದಕ ಕೈತಪ್ಪಿದೆ. ಈ ತಂಡದಲ್ಲಿದ್ದ ಕರ್ನಾಟಕದ ರಾಜೇಶ್ವರಿ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
Saval TV on YouTube