ಹೊನ್ನಾಳಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗಲಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಧಕ್ಕೆಯಾಗಲಿದೆ. ಆದ್ದರಿಂದ, ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ಮರು ಆಯ್ಕೆ ಮಾಡುವ ಮೂಲಕ ಡಬಲ್ ಇಂಜಿನ್ ಸರ್ಕಾರಕ್ಕೆ ಮತ ನೀಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.
ಭಾನುವಾರ ಹೊನ್ನಾಳಿಯಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಡ್ಡಾ, ಶಿವಮೊಗ್ಗದಲ್ಲಿ ಹರ್ಷ ಮತ್ತು ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಅವರಂತಹ ಕೆಲವು ಹಿಂದೂ ಕಾರ್ಯಕರ್ತರ ಕೊಲೆಗಳಿಗೆ ಕಾರಣವಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಚಟುವಟಿಕೆಗಳನ್ನು ಪರಿಶೀಲಿಸುವಲ್ಲಿ 2013ರಿಂದ 2018ರವರೆಗಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ವಿಫಲವಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ವಿರುದ್ಧ ಶೇ 40 ರಷ್ಟು ಕಮಿಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿದ ನಡ್ಡಾ, 2013 ರಿಂದ 2018 ರವರೆಗೆ ಸಿದ್ದರಾಮಯ್ಯನವರು ಸಿಎಂ ಆಗಿದ್ದ ಅವಧಿಯಲ್ಲಿ ಪ್ರತಿ ವರ್ಷವೂ ಹಗರಣಗಳು ನಡೆಯುತ್ತಿದ್ದವು. ಶಿಕ್ಷಕರ ನೇಮಕಾತಿ ಹಗರಣ, ಪೊಲೀಸ್ ನೇಮಕಾತಿ ಹಗರಣ, ಸ್ಟೀಲ್ ಬ್ರಿಡ್ಜ್ ಹಗರಣ, ಮಲಪ್ರಭಾ ಕಾಲುವೆ ಅಭಿವೃದ್ಧಿ ಹಗರಣ, ಅರ್ಕಾವತಿ ಲೇಔಟ್ ಹಗರಣಗಳು ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಎಲ್ಲಾ ಹಗರಣಗಳನ್ನು ಚೆನ್ನಾಗಿ ನಿರ್ವಹಿಸಿದೆ. ಹಗರಣ ಮತ್ತು ಕಮಿಷನ್ ಪದವು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಹೆಸರಿನ ಸಮಾನಾರ್ಥಕವಾಗಿದೆ ಎಂದು ಆರೋಪಿಸಿದರು.
ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಗಲಭೆ ನಡೆಯುತ್ತದೆ ಎಂಬ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಪ್ರಕರಣ ದಾಖಲಿಸಿದ್ದಾರೆ.
ಮನುಷ್ಯನಿಗೆ ಹಣ ಮುಖ್ಯನಾ?…. ಇಲ್ಲ ಗುಣ ಮುಖ್ಯಾನಾ?……
ನಾಡ ದೇವತೆ…. ಶ್ರೀ ಚಾಮುಂಡೇಶ್ವರಿ…🙏🏻
ನಮ್ಮ ರಾಜ್ಯದ ಭವಿಷ್ಯ ಚಿಂತಾ ಜನಕವಾಗಿದೆ ಪುಗಸಟ್ಟೆ ಕೊಡುವ ಅವಾಂತರ
ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಪ್ಪ ಬರಿಮಾತಲ್ಲ ಊಹೆಗೂ ನಿಲುಕದ ಆಕಾಶ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.