ಬೆಂಗಳೂರು : ಮದುವೆಯಾಗ್ತೀನಿ ಅಂತ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಡಿಜೆ ಹಳ್ಳಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.
ಡಿ.ಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಮುಸ್ಲಿಂ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ರಿಜಿಸ್ಟರ್ ಮ್ಯಾರೇಜ್ ಆಗ್ತೀನಿ, ಮನೆ ಕೊಡುಸ್ತಿನಿ, ಬ್ಯೂಟಿ ಪಾರ್ಲರ್ ಓಪನ್ ಮಾಡಿ ಕೊಡ್ತೀನಿ. ನಿನ್ನ ಲೈಫ್ ಸೆಟಲ್ ಮಾಡ್ತೀನಿ ಎಂದು ಹೇಳಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಒಂದು ವರ್ಷದಲ್ಲಿ ಎರಡ್ಮೂರು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಡಿಜೆ ಹಳ್ಳಿಯ 8ನೇ ಮೈಲಿಯಲ್ಲಿರುವ ತಮ್ಮ ಮನೆ ಮತ್ತು ಹೋಟೆಲ್‌ಗೆ ಕರೆಸಿ ಅತ್ಯಾಚಾರ ಎಸಗಿದ್ದಾರೆ. ಆದರೆ ಇದೀಗ ನಮ್ಮ ವಿಚಾರ ಯಾರಿಗಾದರೂ ಹೇಳಿದರೆ, ಕೊಲೆ ಮಾಡುತ್ತೇವೆಂದು ಹೇಳಿ ಬೆದರಿಕೆ ಹಾಕುತ್ತಿದ್ದಾರೆ.
ಅಲ್ಲದೇ ನನ್ನ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ಬೆದರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನೂ ಪ್ರತಿಬಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಮಹಿಳೆ ಡಿಜಿ ಕಚೇರಿಗೆ ದೂರು ನೀಡಿ, ನ್ಯಾಯಾ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.














