ಚಿತ್ರದುರ್ಗ(Chitradurga): ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಮುರುಘಾ ಮಠದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ.
ಮಕ್ಕಳು ಮೈಸೂರಿನ ಒಡನಾಡಿ ಸಂಸ್ಥೆ ಸಂಪರ್ಕಿಸಿದ ಮಾಹಿತಿ ಶುಕ್ರವಾರ ಲಭ್ಯವಾಗುತ್ತಿದ್ದಂತೆ ಮಠದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಠದ ಭಕ್ತರು, ಶರಣರ ಹಿತೈಷಿಗಳು ಮಠಕ್ಕೆ ಭೇಟಿ ನೀಡುತ್ತಿದ್ದು, ಮುರುಘಾ ಶರಣರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಮಠದಲ್ಲಿ ಸಭೆ ನಡೆಯುತ್ತಿದ್ದು, ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ. . .ನಿರಂತರ ಲೈಂಗಿಕ ದೌರ್ಜನ್ಯ ಆರೋಪ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದೂರು ದಾಖಲು
ಘಟನೆ ಸಂಬಂಧಮಕ್ಕಳ ಕಲ್ಯಾಣ ಸಮಿತಿ ಎದುರು ಬಾಲಕಿಯರು ಹೇಳಿಕೆ ನೀಡಿದ ಬಳಿಕ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ. . .ಲೈಂಗಿಕ ಕಿರುಕುಳ ಆರೋಪ: ಮುರುಘಾ ಶರಣರ ವಿರುದ್ಧ ಫೋಕ್ಸೋ ಕಾಯ್ದೆಯಡಿ ದೂರು ದಾಖಲು














