ಮನೆ ರಾಜಕೀಯ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

0

ಬೆಂಗಳೂರು(Bengaluru): ಸರ್ಕಾರಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಆರೋಪದ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್​​​ ಭಟ್​ ವಿರುದ್ಧ ಲೋಕಾಯುಕ್ತಗೆ ಬಿಜೆಪಿ ಮುಖಂಡ ಎನ್.ಆರ್.ರಮೆಶ್ ದೂರು ನೀಡಿದ್ದಾರೆ.

ಖಾಸಗಿ ಬಿಲ್ಡರ್​​​ ಅಶೋಕ್​ ಧಾರಿವಾಲ್ ಎಂಬುವವರಿಗೆ ಕಾನೂನುಬಾಹಿರವಾಗಿ ಭೂಮಿಯನ್ನು ಡಿ-ನೊಟಿಫೈ ಮಾಡಿಕೊಡಲಾಗಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು ಕಸಬಾ ಹೋಬಳಿಯ ಸಿದ್ದಾಪುರದ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ಭೂಮಿಯನ್ನು ಡಿನೋಟಿಫೈ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸರ್ವೆ ನಂಬರ್ 27/1, 28/4, 28/5 ಮತ್ತು 28/6 ರಲ್ಲಿರುವ ಸುಮಾರು 2.39 ಎಕರೆ ಭೂಮಿಯನ್ನು ಡಿ-ನೋಟಿಫೈ ಮಾಡಲಾಗಿದೆ. ಈ ಭೂಮಿಯ ಮೌಲ್ಯವು ₹ 200 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಭಾವಿ ಬಿಲ್ಡರ್ ಒಬ್ಬರ ಹಣದ ಪ್ರಭಾವಕ್ಕೆ ಒಳಗಾಗಿ ಕಾನೂನುಬಾಹಿರವಾಗಿ ಸರ್ಕಾರಿ ಸ್ವತ್ತನ್ನು ರಿ-ಡೂ (Re-Do) ಎಂಬ ಹೆಸರಿನಲ್ಲಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಎನ್ ಆರ್ ರಮೇಶ್ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಹಿಂದಿನ ಲೇಖನಮಂಡ್ಯ:  ಅತ್ಯಾಚಾರವೆಸಗಿ ಬಾಲಕಿಯ ಕೊಲೆ, ಟ್ಯೂಷನ್ ಸೆಂಟರ್ ನೌಕರನ ಬಂಧನ
ಮುಂದಿನ ಲೇಖನಬಿಎಸ್ ವೈ ಅವರು ರಾಜ್ಯದ ಜನರ ಹೃದಯ ಸಿಂಹಾಸನದಲ್ಲಿದ್ದಾರೆ: ಸಿಎಂ ಬೊಮ್ಮಾಯಿ