ಮೈಸೂರು: .ಆರ್ ನಗರ ತಾಲೂಕಿನ ಮಿರ್ಲೆ ಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಹಾಕುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಂತೆ ಹಾಗೂ ಯುವಜನತೆ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸ್ವಇಚ್ಛೆಯಿಂದ ಮತ ಚಲಾಯಿಸಲು ಮಿರ್ಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂದೀಪ್ ಕರೆ ನೀಡಿದರು.
ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಜಾಥ, ಮತದಾನ ಹಾಗೂ ಪ್ಲಾಸ್ಟಿಕ್ ನಿಷೇಧ ಕುರಿತು ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕವಿತಾ, ಐಇಸಿ ಸಂಯೋಜಕ ಸಂಜಯ್ ಬಿ.ಸಿ, ದ್ವಿತೀಯ ದರ್ಜೆ ಸಹಾಯಕರು ಶ್ರೀಧರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರಾದ ಪುನೀತ್, ರಶ್ಮಿ, ವಸಂತ್, ಕೌಶಿಕ್, ಬಿ,ಎಫ್,ಟಿ ಉಮೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.