ಮನೆ ರಾಜ್ಯ 20 ಸಾವಿರಕ್ಕಿಂತ ಕಡಿಮೆ ಅರ್ಜಿ ಸಲ್ಲಿಕೆಯಾದರೆ ಕಂಪ್ಯೂಟರ್ ಪರೀಕ್ಷೆ

20 ಸಾವಿರಕ್ಕಿಂತ ಕಡಿಮೆ ಅರ್ಜಿ ಸಲ್ಲಿಕೆಯಾದರೆ ಕಂಪ್ಯೂಟರ್ ಪರೀಕ್ಷೆ

0

ಬೆಂಗಳೂರು(Bengaluru): ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಮುಂದೆ ‘ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆ’ (ಸಿಬಿಆರ್‌’ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌’ಸಿ) ನಿರ್ಧರಿಸಿದೆ.

ಕೆಪಿಎಸ್‌ಸಿ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಈ ಕುರಿತು ಮಾಹಿತಿ ನೀಡಿದ್ದು, ಸಿಬಿಆರ್‌’ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶದಿಂದ ಜ.7 ರಂದು ಸಿಬಿಆರ್‌’ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಪರೀಕ್ಷೆ ಯಶಸ್ವಿಯಾಗಿದೆ. ಹೀಗಾಗಿ, ಈ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಡಿ. 3 ರಂದು ನಡೆದ ಆಯೋಗದ ಸಭೆಯಲ್ಲಿ ನಿರ್ಣಯಿಸಿದಂತೆ, ಸಿಬಿಆರ್‌’ಟಿ ಅಣಕು ಪರೀಕ್ಷೆ ನಡೆಸಲು ಡಿ.22 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಹಿಂದಿನ ಲೇಖನಕಾರು – ಟ್ರಕ್‌ ಅಪಘಾತ: ಏಳು ಮಂದಿಗೆ ಗಾಯ
ಮುಂದಿನ ಲೇಖನಆರ್‌’ಟಿಐ ಕಾರ್ಯಕರ್ತನ ಹತ್ಯೆ: ಪಿಡಿಓ ಸೇರಿದಂತೆ 11 ಮಂದಿ ವಿರುದ್ಧ ಪ್ರಕರಣ ದಾಖಲು