ಮನೆ ಸ್ಥಳೀಯ ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿ: ಅರುಣ್ ಕುಮಾರ್...

ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿ: ಅರುಣ್ ಕುಮಾರ್ ಎಸ್.

0

ಮೈಸೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟಂತಹ ಅರಿವು ಕಾರ್ಯಕ್ರಮಗಳನ್ನು ಹೆಚ್ಚು ಮಾಡಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಅರುಣ್ ಕುಮಾರ್ ಎಸ್. ಅವರು ಹೇಳಿದರು.

ಇಂದು ಜಿಲ್ಲಾ ಪಂಚಾಯತ್‌ನ ಡಿ.ದೇವರಾಜು ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಸಿಗುವಂತಹ ಪಂಚ ಗ್ಯಾರೆಂಟಿ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತೆ ಪ್ರತಿಯೊಂದು ಇಲಾಖೆಯು ಕಾರ್ಯ ನಿರ್ವಹಿಸಬೇಕು. ಎಲ್ಲಾ ಯೋಜನೆಯೋಗಳ ಬಗ್ಗೆ ಫಲಾನುಭವಿಗಳಿಗೆ ತಿಳಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಏನಾದರೂ ಸಮಸ್ಯೆಗಳಿದ್ದರೆ ಅವರಿಗಾಗಿ ದೂರು ಪೆಟ್ಟಿಗೆಯನ್ನು ತೆರೆಯಬೇಕು ಎಂದು ಸೂಚಿಸಿದರು.

ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಮಾಡಬೇಕು. ಈ ಯೋಜನೆಯ ಬಗ್ಗೆ ಎಲ್ಲರಿಗೂ ಪ್ರಚಾರ ಮಾಡಿ ಮಾದರಿ ಯೋಜನೆಯನ್ನಾಗಿ ಮಾಡಬೇಕು. ಸಿ.ಡಿ.ಪಿ.ಓ. ಗಳು ಪ್ರತಿ ಗ್ರಾಮ ಪಂಚಾಯಿತಿಗಳಿಗೂ ಹೋಗಿ ವಿಚಾರಣೆ ಮಾಡಬೇಕು. ಹತ್ತಿರದಲ್ಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳಿಗೆ ಅನುಕೂಲ ಅಗುತ್ತಿದೆಯೇ ಎಂದು ವಿಚಾರಣೆ ಮಾಡಬೇಕು ಎಂದು ಹೇಳಿದರು.

ಗ್ಯಾರೆಂಟಿ ಯೋಜನೆಗಳ ಸೂಕ್ತ ಅನುಷ್ಠಾನದಲ್ಲಿ ಎಲ್ಲಾ ಅಧಿಕಾರಿಗಳು ಶ್ರದ್ದೆಯಿಂದ ಕೆಲಸ ಮಾಡಬೇಕು ಸರ್ಕಾರದ ಕೆಲಸ ಎಂದು ತಿಳಿಯದೇ ಪ್ರತಿಯೊಂದು ಇಲಾಖೆಯಯವರು ಜೊತೆಗೂಡಿ ಕೆಲಸ ನಿರ್ವಹಿಸಬೇಕೆಂದು ಎಲ್ಲಾ ಅಧಿಕಾರಿಗಳಿಗೂ ಸೂಚಿಸಿದರು.

ಅನ್ನಭಾಗ್ಯ ಯೋಜನೆಯ ಬಗ್ಗೆ ಎಲ್ಲಾ ಕಡೆಗಳಲ್ಲಿಯೂ ಪ್ರಚಾರ ಫಲಕಗಳನ್ನು ಅಳವಡಿಸಬೇಕು ತಾಲ್ಲೂಕುವಾರು ನ್ಯಾಯ ಬೆಲೆ ಅಂಗಡಿಗಳ ಕಡೆ ಹೆಚ್ಚು ಗಮನವಹಿಸಬೇಕು. ಅನ್ನಭಾಗ್ಯ ಯೋಜನೆಯಲ್ಲಿ ಯಾವುದೇ ಲೋಪ ನಡೆಯದಂತೆ ಕ್ರಮವಹಿಸಬೇಕು ಇದು ಪ್ರತಿಯೊಬ್ಬ ಅಧಿಕಾರಿಗಳ ಜವಾಬ್ದಾರಿಯಾಗಿದೆ ಅನ್ನಭಾಗ್ಯ ಯೋಜನೆಯ ಸಂಬಂಧಪಟ್ಟಂತೆ ಆಪ್ ಅನ್ನು ಕ್ರಿಯೇಟ್ ಮಾಡಬೇಕು ಎಂದು ಹೇಳಿದರು.

ರಾಜ್ಯದ ಜನರಿಗೆ ೨೦೦ ಯೂನಿಟ್ ಉಚಿತ ವಿದ್ಯುತ್ ಅನ್ನು ಗೃಹಜ್ಯೋತಿ ಯೋಜನೆಯಡಿ ನೀಡುತ್ತಿದ್ದು, ಈ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸಬೇಕು. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು ೧೧೧೫೪ ಅಭ್ಯರ್ಥಿಗಳು ನೊಂದಣಿಯಾಗಿದ್ದು, ಫೆಬ್ರವರಿ ಮಾಹೆಯ ಅಂತ್ಯಕ್ಕೆ ೮೨೮೬ ಫಲಾನುಭವಿಗಳು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಯಾವುದೇ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಬರದಂತೆ ಪ್ರತಿಯೊಂದು ಇಲಾಖೆಯವರು ಹೆಚ್ಚು ಕ್ರಮವಹಿಸಬೇಕು. ಪ್ರತಿಯೊಂದು ಯೋಜನೆಗಳು ಜನರಿಗೆ ತಲುಪುವಂತೆ ಮಾಡಬೇಕು ಎಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಯುಕೇಶ್ ಕುಮಾರ್, ಗ್ಯಾರಂಟಿ ಯೋಜನೆಯ ಜಿಲ್ಲಾ ಮಟ್ಟದ ಉಪಾಧ್ಯಕ್ಷರಾದ ಚಂದ್ರಶೇಖರ್, ಸಾ.ಮಾ.ಯೋಗೇಶ್, ಪ್ರೊ.ಶಿವಕುಮಾರ್, ಹುಣಸೂರು ಬಸವಣ್ಣ, ಹಾಗೂ ಸದಸ್ಯರಾದ ಲತಾ, ಕೆ. ಮಾರುತಿ, ರಘು, ಅಬ್ದುಲ್ ಖಾನ್ ಪ್ರಸನ್ನ ಬಾಬು ಹಾಗೂ ಮತ್ತಿತರರು ಉಪಸ್ಥಿತರಿದ್ದರು.