ಮೈಸೂರು: ಸಮಾಜದ ಕಟ್ಟಕಡೆಯ ವ್ಯಕ್ತಿಯಿಂದಿಡಿದು ಸರ್ಕಾರದ ವಿವಿಧ ಯೋಜನೆಗಳ ಫಲ ಉಂಡಿರುವ ‘ಫಲಾನುಭವಿಗಳ ಸಮ್ಮೇಳನ’ವನ್ನು ಜಿಲ್ಲೆಯಲ್ಲಿ ಮಾರ್ಚ್ 4 ರಂದು ಆಯೋಜಿಸಲಾಗುತಿದ್ದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಹೇಳಿದರು.
ಜಿಲ್ಲಾಡಳಿತ ಭವನದ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿಯೇ ಮೊದಲ ಬಾರಿಗೆ ಮೈಸೂರಿನಲ್ಲಿ ಫಲಾನುಭವಿಗಳ ಉತ್ಸವ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಲಿದ್ದು 25 ರಿಂದ 30 ಸಾವಿರ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆ,ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಫಲಾನುಭವಿಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ವಿಧಾನಸಭಾ ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ಜನಪ್ರತಿನಿಧಿಗಳು ಬಾಗವಹಿಸುವುದರೊಂದಿಗೆ ಮತ್ತಷ್ಟು ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಿದ್ದಾರೆ.
ಕಳೆದ 4 ವರ್ಷಗಳಿಂದ ಸರ್ಕಾರದ ವಿವಿಧ ಯೋಜ ಹಾಗೂ ಕಾರ್ಯಕ್ರಮಗಳಲ್ಲಿ ಫಲಾನುಭವಿಗಳಾಗಿರುವವರ ಪೋಟೋ ಹಾಗೂ ಅವರ ಅನಿಸಿಕೆ ಮತ್ತು ವಿವಿಧ ಇಲಾಖೆಗಳ ಯೋಜನೆಗಳನ್ನು ಪ್ಲೆಕ್ಸ್ ಗಳಲ್ಲಿ ಬರೆಯಿಸಿ ಪ್ರದರ್ಶಿಸಿ ಎಂದರು.
ವಿವಿಧ ಯೋಜನೆಗಳಾದ ಪಿಂಚಣಿ ಯೋಜನೆಗಳು,ಗೃಹಭಾಗ್ಯ, ಸ್ತ್ರೀಶಕ್ತಿ ಸಂಘಗಳಿಗೆ ಸಹಾಯ,ಆಯುಷ್ಮಾನ್ ಕಾರ್ಡ್, ಆರೋಗ್ಯ ಇಲಾಖೆ ಸೇವೆಗಳು, ಕೃಷಿ,ತೋಟಗಾರಿಕೆ ಸೇರಿದಂತೆ ಎಲ್ಲ ಇಲಾಖೆಗಳ ತಾಲೂಕು ಜಿಲ್ಲಾ ಮಟ್ಟದ ಅಧಿಕಾರಿಗಳು ಫಲಾನುಭವಿಗಳ ಸಮ್ಮೇಳನಕ್ಕೆ ಕರೆತರಲು ಶ್ರಮಿಸಬೇಕೆಂದರು.
ಸಭೆಯಲ್ಲಿ ಜಿ.ಪಂ.ಸಿಇಓ,ಮಹಾನಗರ ಪಾಲಿಕೆ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.