ಮೈಸೂರು: ಕಾಂಗ್ರೆಸ್ ನೀತಿಗಳಿಂದ ರಾಜ್ಯ ದಿವಾಳಿ ಆಗುತ್ತಿದೆ. ಸದ್ಯದಲೇ ಎಲ್ಲಾ ರೀತಿಯ ತೆರಿಗೆ ಹೆಚ್ಚು ಮಾಡುತ್ತಾರೆ. ಆಸ್ತಿ ನೋಂದಣಿ, ಮದ್ಯದ ತೆರಿಗೆ ಹೀಗೆ ಎಲ್ಲವೂ ಹೆಚ್ಚಾಗುತ್ತದೆ. ಕರ್ನಾಟಕಕ್ಕೆ ಶ್ರೀಲಂಕಾ, ಬಾಂಗ್ಲಾದೇಶದ ಸ್ಥಿತಿ ಬರುವ ಕಾಲ ದೂರವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸುಭಿಕ್ಷ ರಾಜ್ಯ ಕರ್ನಾಟಕವನ್ನು ಭಿಕ್ಷಾ ರಾಜ್ಯ ಮಾಡುತ್ತಿದೆ. ಪಲೋಕಸಭಾ ಚುನಾವಣೆವರೆಗೂ ಜನರನ್ನು ಗ್ಯಾರಂಟಿ ಜಾರಿ ಹೆಸರಿನಲ್ಲಿ ಮಂಗ್ಯಾ ಮಾಡುತ್ತಾರೆ ಎಂದು ಗುಡುಗಿದ್ದಾರೆ.
ಚುನಾವಣೆಗೆ ಮೊದಲು ಕಾಂಗ್ರೆಸ್ ನವರು ಎದೆ ಬಡಿದುಕೊಂಡು ಊರು ಊರಿಗೆ ಹೋಗಿ ತಮಟೆ ಬಾರಿಸಿದ್ದರು. ವಿದ್ಯುತ್ ಎಲ್ಲರಿಗೂ ಉಚಿತ ಅಂದಿದ್ದರು, ಆದರೆ ಕೆಎಸ್ಆರ್ ಟಿಸಿ ಗೆ ಇನ್ನೂ ಮಾಹಿತಿ ಬಂದಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ತಲೆ ಮೇಲೆ ಟೋಪಿ ಹಾಕಿ ಕೊಂಡವರನ್ನು ಕಾಂಗ್ರೆಸ್ ನವರು ಎನ್ನುತ್ತಿದ್ದರು. ಈಗ ಕಾಂಗ್ರೆಸ್ ನವರನ್ನು ಜನರಿಗೆ ಟೋಪಿ ಹಾಕುವವರು ಎನ್ನುತ್ತಾರೆ ಎಂದು ವ್ಯಂಗ್ಯವಾಡಿದರು.
ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದಿರಿ. ಈಗ ಸರಾಸರಿ ತೆಗೆದು ಉಚಿತ ಕೊಡುತ್ತೇವೆಂದು ಹೇಳಿದ್ದೀರಿ. ಇದು ಮೋಸ ಅಲ್ವಾ? ಯಾವುದು ಷರತ್ತು ಇಲ್ಲದೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲೇ ಬೇಕು. ಜನ್ ಧನ್ ಖಾತೆಯಿದೆ. ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿದೆ. ಹೀಗಿದ್ದರೂ ಗೃಹ ಲಕ್ಷ್ಮಿ ಜಾರಿ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದರು.
ಗೃಹ ಲಕ್ಷ್ಮಿ ಯೋಜನೆ ಮುಂದೂಡಲು ಕುಂಟು ನೆಪ ಹೇಳಲಾಗುತ್ತಿದೆ. ಮನೆ ಯಜಮಾನಿ ಯಾರೆಂದು ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ – ಸೊಸೆ ಕುಳಿತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಯಲ್ಲಾದರೂ ಅತ್ತೆ – ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತದೆ. ಆದರೆ, ಮುಸ್ಲಿಂರ ಮನೆಯಲ್ಲಿ ಎರಡು- ಮೂರು ಹೆಂಡತಿ ಇರುತ್ತಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ಬೆಂಕಿ ಹಾಕುತ್ತಿದ್ದಿರಿ. ಕಾಂಗ್ರೆಸ್ ಪಕ್ಷದಿಂದ ಕುಟುಂಬ ಒಡೆಯುವ ಕೆಲಸ ಆಗುತ್ತಿದೆ ಎಂದು ಪ್ರತಾಪ್ ಸಿಂಹ ಹೇಳಿದರು.
6 ಕೆಜಿ ಅಕ್ಕಿಯನ್ನು ಕೇಂದ್ರ ಸರಕಾರ ಕೊಡುತ್ತಿದೆ. ಇದಕ್ಕೆ ನಾಲ್ಕು ಕೆಜಿ ಅಕ್ಕಿ ಸೇರಿಸಿ, 10 ಕೆಜಿ ಎಂದು ಅಕ್ಕಿ ಕೊಟ್ಟರೆ ಅದು ನಿಮ್ಮ ಗ್ಯಾರಂಟಿ ಹೇಗೆ ಆಗುತ್ತೆ? ಇದು ಮೋಸ ಅಲ್ಲವೇ? ಯುವ ನಿಧಿ ಹೆಸರಿನಲ್ಲೂ ಸರಕಾರ ಜನರಿಗೆ ಮೋಸ ಮಾಡುತ್ತಿದೆ. ಮತಗಳ ಹಗಲು ದರೋಡೆ ಮಾಡಿ ಈಗ ಜನರಿಗೆ ಟೋಪಿ ಹಾಕುವ ಕೆಲಸ ನಡೆಯುತ್ತಿದೆ ಎಂದ ಪ್ರತಾಪ್ ಸಿಂಹ, ಕೇಜ್ರಿವಾಲ್ 2013ರಲ್ಲಿ ಕಳಪೆ ಫ್ರೀ ಯೋಜನೆ ತಂದಿದ್ದರು. ಈಗ ಅದನ್ನೆ ಕಾಂಗ್ರೆಸ್ ಸರಕಾರ ಮಾಡಿದೆ. ಇದು ಕರ್ನಾಟಕ ಮಾಡೆಲ್ ಅಲ್ಲ. ಇದನ್ನು ಹಲವರು ರಾಜ್ಯದಲ್ಲಿ ಮಾಡಿ ಜನರನ್ನು ಮಂಗ್ಯಾ ಮಾಡಲಾಗಿದೆ. ಕಾಂಗ್ರೆಸ್ ನ ಪ್ರಣಾಳಿಕೆ ಈಡೇರಿಸಲು ಕೇಂದ್ರ ಬಜೆಟ್ ಹಣ ತಂದರೂ ಆಗಲ್ಲ ಎಂದು ಕಿಡಿಕಾರಿದರು.
ಮಾನ್ಯ ಶ್ರೀ ಪ್ರದೀಪ್ ಕುಮಾರ್ ರವರ ಹುಟ್ಟು ಹಬ್ಬದ ಆಚರಣೆ
ಊರು ಬಿಟ್ಟು ದೂರದ ಊರಿಗೆ ಹೋಗಿರುವ ಮಕ್ಕಳು ತಂದೆ- ತಾಯಿಯ ನೋವನ್ನ ಅರ್ಥ ಮಾಡಿಕೊಳ್ಳಬೇಕು
ಸವಾಲ್ ಪತ್ರಿಕೆಯ ಸಂಪಾದಕರು HRAC ಸ್ಥಾಪಕರು ಆದ ಪ್ರದೀಪ್ ಕುಮಾರ್ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು 16-06-2023
ಅದ್ಬುತ ಮಾತುಗಳು ದಯವಿಟ್ಟು ಎಲ್ಲ ತಂದೆ ತಾಯಿ ಮಕ್ಕಳು ಇದನ್ನ ನೋಡಲೇ ಬೇಕು ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.