ಮನೆ ರಾಜ್ಯ ವರುಣಾದಲ್ಲಿ ಮುಂದುವರೆದ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ: ಬಿಜೆಪಿ ಬೂತ್ ಅಧ್ಯಕ್ಷನ ಮೇಲೆ ಹಲ್ಲೆ

ವರುಣಾದಲ್ಲಿ ಮುಂದುವರೆದ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ: ಬಿಜೆಪಿ ಬೂತ್ ಅಧ್ಯಕ್ಷನ ಮೇಲೆ ಹಲ್ಲೆ

0

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ರಾಜಕೀಯ ಗಲಾಟೆ ಮುಂದುವರೆದಿದ್ದು, ಬಿಜೆಪಿ ಬೂತ್ ಅಧ್ಯಕ್ಷನ ಮೇಲೆ ಹಲ್ಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

Join Our Whatsapp Group

ವರುಣಾ ಕ್ಷೇತ್ರದ ಬೂತ್ ನಂಬರ್‌ 109ರ ಬಿಜೆಪಿ ಬೂತ್ ಅಧ್ಯಕ್ಷ ದೀಲಿಪ್ ಕುಮಾರ್ ಮೇಲೆ ಹಲ್ಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಇದರಿಂದ ದೀಲಿಪ್ ಕುಮಾರ್ ತಲೆಗೆ ಪೆಟ್ಟಾಗಿದ್ದು, ಅವರನ್ನು ಟಿ.ನರಸೀಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿಗೆ ನೀವು ಬೆಂಬಲ ನೀಡುತ್ತಿದ್ದೀರಾ? ಅದನ್ನು ನಿಲ್ಲಿಸಿ ಕಾಂಗ್ರೆಸ್ ಬೆಂಬಲಿಸಿ ಎಂದು ಹಲ್ಲೆ ಮಾಡಿದ್ದಾರೆ ಎಂದು ದೀಲಿಪ್ ಕುಮಾರ್ ಆರೋಪಿಸಿದ್ದು, ಕ್ಷುಲಕ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಟಿ.ನರಸೀಪುರ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಇನ್ನು ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಹಿಂದಿನ ಲೇಖನಶೋಭಾ ಕರಂದ್ಲಾಜೆ, ಬಿಎಸ್ ವೈ ಲೀಲಾ ಪ್ಯಾಲೇಸ್ ನಲ್ಲಿ ಭೇಟಿಯಾಗಿದ್ದ ವ್ಯಕ್ತಿ ಯಾರು?:  ಎಂಬಿ ಪಾಟೀಲ್
ಮುಂದಿನ ಲೇಖನತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ ಚೈತನ್ಯ ಆತ್ಮಹತ್ಯೆ