ಹುಕ್ಕೇರಿ: ಎಸ್ ಡಿಪಿಐ ಬೆಂಬಲದಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿದರು. ಕರ್ನಾಟಕದಲ್ಲಿ ಎಸ್ ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪರಿಣಾಮ ನೋಡಿ, ಅವರು ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಆರೋಪಿಸಿದರು.
Saval TV on YouTube