ಮನೆ ರಾಜ್ಯ ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಾಯ

ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಾಯ

0

ತುಮಕೂರು:  ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾಜಿ.ಪರಮೇಶ್ವರ್ ಪ್ರಚಾರ ನಡೆಸುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಕಲ್ಲು ತೂರಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಬೈರೇನಹಳ್ಳಿಯಲ್ಲಿ ನಡೆದಿದೆ.

Join Our Whatsapp Group

ಡಾ.ಜಿ.ಪರಮೇಶ್ವರ್ ಅವರ ತಲೆಗೆ ಗಾಯವಾಗಿದೆ.

ಡಾ ಜಿ.ಪರಮೇಶ್ವರ್ ರನ್ನ ಕಾರ್ಯಕರ್ತರು ಎತ್ತಿ ಕುಣಿಯುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಪರಮೇಶ್ವರ್ ಅವರ ತಲೆಗೆ ಕಲ್ಲೆಸೆದಿದ್ದಾನೆ ಎನ್ನಲಾಗಿದೆ.

ಘಟನೆಯಲ್ಲಿ ಪರಮೇಶ್ವರ್ ಅವರ ತಲೆಗೆ ಪೆಟ್ಟಾಗಿದ್ದು ತಕ್ಷಣ ಅವರಿಗೆ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.