ಮನೆ ರಾಜಕೀಯ ಅಲ್ಪಸಂಖ್ಯಾತರ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ: ಬಿ.ಎಸ್. ಯಡಿಯೂರಪ್ಪ

ಅಲ್ಪಸಂಖ್ಯಾತರ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ: ಬಿ.ಎಸ್. ಯಡಿಯೂರಪ್ಪ

0

ಶಿವಮೊಗ್ಗ: ಕೇವಲ ಅಲ್ಪಸಂಖ್ಯಾತರ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ನೀಡುವ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿದ್ದರಾಮಯ್ಯ ಸಿಎಂ‌ ಆಗಿ ಮುಸ್ಲಿಂ ಸಮುದಾಯಕ್ಕೆ ಹಣ ನೀಡುವುದರಲ್ಲಿ ತಪ್ಪೇನಿಲ್ಲ, ಆದರೆ ಒಂದು ಸಮುದಾಯದ ಓಲೈಕೆಗೆ ಮುಂದಾಗಿರುವುದು ಸರಿಯಲ್ಲ ಈ ಬಗ್ಗೆ ಈಗಾಗಲೇ ಹಲವು ಮಠಾಧೀಶರು ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ವೀರ ಸಾವರ್ಕರ್ ಫೋಟೋ ತೆರವು ವಿಚಾರ ಬಗ್ಗೆ ಮಾತನಾಡಿದ ಅವರು ಈ ರೀತಿಯ ಕ್ರಮ ಸರಿಯಲ್ಲ ಈ ರೀತಿಯ ಪ್ರಯತ್ನಕ್ಕೆ ಯಾರೂ ಕೂಡ ಕೈ ಹಾಕಬಾರದು ಎಂದು ಹೇಳಿದರು.

ಮಂಡ್ಯ ಭ್ರೂಣ ಹತ್ಯೆ ಪ್ರಕರಣ ವಿಚಾರವಾಗಿ ಹೇಳಿಕೆ ನೀಡಿದ ಅವರು ಇಂತಹ ಘಟನೆ ಆಗಬಾರದು. ಇದರಲ್ಲಿ ಯಾರೂ ಭಾಗಿಯಾಗಿದ್ದಾರೆ ಯಾರು ತಪ್ಪಿತಸ್ಥರು ಅವರ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಬೇಕೆಂದು ನಾನು ಆಗ್ರಹ ಮಾಡುತ್ತೇನೆ ಎಂದರು.

ಸೋಮಣ್ಣ ಪಕ್ಷ ಬಿಡುವ ವಿಚಾರವಾಗಿ ಮಾತನಾಡಿ, ಅವರು ಎಲ್ಲಿಗೂ ಹೋಗುವುದಿಲ್ಲ ನಮ್ಮ ಪಕ್ಷದಲ್ಲೇ ಇರುತ್ತಾರೆ, ಅವರ ಜೊತೆ ನಾನು ಮಾತನಾಡುತ್ತೇನೆ ಎಂದು ಹೇಳಿದರು.

ಇನ್ನು ಬರಗಾಲ ಪರಿಹಾರ ಕೇಂದ್ರದಿಂದ ಬಂದಿಲ್ಲ ಎಂಬ ಕಾಂಗ್ರೆಸ್ ಆರೋಪ ಕುರಿತು ಹೇಳಿಕೆ ನೀಡಿದ ಬಿಎಸ್ ವೈ, ಬರ ಪರಿಹಾರ ಕುರಿತು ಶೀಘ್ರದಲ್ಲೇ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಹಣ ಬಿಡುಗಡೆ ಮಾಡುವಂತೆ ಕೋರುತ್ತೇವೆ, ಆದರೆ ರಾಜ್ಯ ಸರ್ಕಾರ ಅದಕ್ಕೆ ಕಾಯದೆ ತನ್ನ ಪಾಲಿನ ಪರಿಹಾರ ನೀಡಲಿ, ಬರ ಎದುರಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸಲಿ‌ ಎಂದು ಹೇಳಿದರು.