ಮನೆ ರಾಜ್ಯ ಮುಂಬರುವ ಚುನಾವಣೆಗೆ ಕಾಂಗ್ರೆಸ್‌ ಅಭಿವೃದ್ಧಿ ಕೆಲಸಗಳೇ ವರದಾನ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ

ಮುಂಬರುವ ಚುನಾವಣೆಗೆ ಕಾಂಗ್ರೆಸ್‌ ಅಭಿವೃದ್ಧಿ ಕೆಲಸಗಳೇ ವರದಾನ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ

0

ಬೆಳಗಾವಿ (Bellagavi): ಕಾಂಗ್ರೆಸ್‌ ಅಭಿವೃದ್ಧಿ ಕೆಲಸಗಳೇ ಮುಂಬರುವ ವಿಧಾನಸಭಾ ಚುನಾವಣೆಗೆ ವರದಾನವಾಗಲಿವೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಇಂದು ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆಗಾಗಿ ಆರು ದಿನಗಳ ಬೃಹತ್ ಸೈಕಲ್ ಜಾಥಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಶತಸಿದ್ಧ, ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಇವತ್ತಿನಿಂದಲೇ ನಾವೆಲ್ಲರೂ ಒಗ್ಗಟ್ಟಾಗಿ ಮಾಡಿಕೊಂಡು ಪಕ್ಷದ ಏಳಿಗೆಗಾಗಿ ದುಡಿಯಬೇಕು ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಆಡಳಿತದ ಅವಧಿಯಲ್ಲಿ ರೂಪಿಸಿದ ಹಲವಾರು ಜನಪರ ಯೋಜನೆಗಳ ಬಗ್ಗೆ ಕಾರ್ಯಕರ್ತರು ಮನೆ ಮನೆಗೆ ತೆರಳಿ ತಿಳಿಸಬೇಕಾದ ಅಗತ್ಯ ಇದೆ. ಈ ಸೈಕಲ್ ಜಾಥಾ ಕಾರ್ಯಕ್ರಮ ಸತತ ಆರು ದಿನಗಳ ಕಾಲ ಜರುಗಿದ್ದು, ಪಕ್ಷದ ಸಂಘಟನೆ ಮತ್ತು ಕಾಂಗ್ರೆಸ್ ಸಿದ್ಧಾಂತಗಳ ಮೂಲಕ ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟ ಕೊಡುಗೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರಲ್ಲಿ ಯಶಸ್ವಿಯಾಗಿದೆ ಎಂದರು.

ರಾಜ್ಯ ಅಭಿವೃದ್ದಿಯಾಗಬೇಕಾದರೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಎಲ್ಲ ಕ್ಷೇತ್ರಗಳಲ್ಲಿ ಮುಖಂಡರು, ಕಾರ್ಯಕರ್ತರು ಸಣ್ಣಪುಟ್ಟ ಮನಸ್ತಾಪಗಳನ್ನು ಬದಿಗಿಟ್ಟು ಒಗ್ಗಟ್ಟಾಗಿ ಚುನಾವಣೆಗಳನ್ನು ಎದುರಿಸಬೇಕಾಗಿದೆ ಎಂದು ಹೇಳಿದರು.