ಮನೆ ಸುದ್ದಿ ಜಾಲ ಕಾಂಗ್ರೆಸ್ ಮಾಜಿ ಶಾಸಕ ಎಂ.ಎಂ. ಸಜ್ಜನ್  ನಿಧನ

ಕಾಂಗ್ರೆಸ್ ಮಾಜಿ ಶಾಸಕ ಎಂ.ಎಂ. ಸಜ್ಜನ್  ನಿಧನ

0

ವಿಜಯಪುರ:  ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಎಂ. ಸಜ್ಜನ (95) ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದು, ಇಂದು‌‌ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ.

ಮಲ್ಲಪ್ಪ ಮುರಿಗೆಪ್ಪ ಸಜ್ಜನ ಅವರು 1972-78 ರವರೆಗೆ ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.

ಇಂದು ಸಾಯಂಕಾಲ 4 ಗಂಟೆಗೆ ಮುದ್ದೇಬಿಹಾಳ ಪಟ್ಟಣದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಕುಟುಂಬಸ್ಥರಿಂದ ತಿಳಿದು ಬಂದಿದೆ.

ಮಾಜಿ ಶಾಸಕ ಎಂ.ಎಂ ಸಜ್ಜನ ಅವರ ನಿಧನಕ್ಕೆ ಹಲವು ಗಣ್ಯರು ಮತ್ತು ಮಠಾಧೀಶರು ಕಂಬನಿ ಮಿಡಿದಿದ್ದಾರೆ.

ಹಿಂದಿನ ಲೇಖನಬೇಲೂರು, ಹಳೆಬೀಡು, ಸೋಮನಾಥಪುರ ದೇವಾಲಯಗಳು ಯುನೆಸ್ಕೋ ಪಟ್ಟಿಗೆ ಸೇರಿಸಲು ಶಿಫಾರಸ್ಸು
ಮುಂದಿನ ಲೇಖನವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಂಚಕ್ಕೆ ಬೇಡಿಕೆ ಆರೋಪ: ನಾಲ್ವರ ಮೇಲೆ ಎಫ್ಐಆರ್