ಶಿವಮೊಗ್ಗ : ಬಿಹಾರದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಅಲ್ಲಿನ ಮತದಾರರು ಪ್ರಧಾನಿ ನರೇಂದ್ರ ಮೋದಿಯವರ ಕೆಲಸ ನೋಡಿ ಜನ ಎನ್‌ಡಿಎಯನ್ನು ಗೆಲ್ಲಿಸಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಬಿಹಾರ ಚುನಾವಣೆಯಲ್ಲಿ ಎನ್‍ಡಿಎ ಜಯಗಳಿಸಿದೆ. ಮೋದಿ ಮತ್ತು ಅಮಿತ್ ಷಾ ಅವರ ಯೋಜನೆ ಯಶಸ್ಸು ಕಂಡಿದೆ. ಮೋದಿಯವರ ನಾಯಕತ್ವಕ್ಕೆ ಮೆಚ್ಚುಗೆ ಚುನಾವಣೆಯಲ್ಲಿ ಸಿಕ್ಕಿದೆ. ಮೋದಿ ಮತ್ತು ಅಮಿತ್ ಷಾ ಚರ್ಚೆ ಮಾಡಿ ಬಿಹಾರ ಸಿಎಂ ಆಯ್ಕೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ನಾಯಕತ್ವವನ್ನು ಜನರು ತಿರಸ್ಕಾರ ಮಾಡಿದ್ದಾರೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ವಿಚಾರವಾಗಿ, ಶೀಘ್ರವೇ ಈ ಸಮಸ್ಯೆಗೆ ಪರಿಹಾರ ಸಿಗಲಿದೆ. ಸರ್ಕಾರವು ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ.














