ಮನೆ ರಾಜಕೀಯ ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ: ಪ್ರಧಾನಿ ಮೋದಿ ಕಿಡಿ

ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ: ಪ್ರಧಾನಿ ಮೋದಿ ಕಿಡಿ

0

ಹೊಸದಿಲ್ಲಿ: ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಮರುದಿನ ಬುಧವಾರ(ಅ9) ಪ್ರಧಾನಿ ನರೇಂದ್ರ ಮೋದಿ ಅವರು ಕಿಡಿ ಕಾರಿದ್ದು, ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ. ಹಿಂದೂಗಳನ್ನು ವಿಭಜಿಸಲು ಮತ್ತು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು ಬಯಸುವ ದ್ವೇಷ ಹರಡುವ ಕಾರ್ಖಾನೆಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Join Our Whatsapp Group

ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7,600 ಕೋಟಿ ರೂ.ಗಿಂತ ಹೆಚ್ಚಿನ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಮೋದಿ ”ನಾವು ದೊಡ್ಡ ಗೆಲುವು ಪಡೆಯಬೇಕು. ವಿಪಕ್ಷವಾದ ಮಹಾ ವಿಕಾಸ್ ಅಘಾಡಿ ಅಧಿಕಾರ ಪಡೆದು ಮಹಾರಾಷ್ಟ್ರವನ್ನು ದುರ್ಬಲಗೊಳಿಸಲು ಬಯಸಿದೆ, ಆದರೆ ಆಡಳಿತಾರೂಢ ಮಹಾಯುತಿಯು ರಾಜ್ಯವನ್ನು ಬಲಪಡಿಸುತ್ತದೆ” ಎಂದರು.

‘ಯೋಜನೆಗಳ ತ್ವರಿತ ಅಭಿವೃದ್ಧಿಯನ್ನು ಮಹಾರಾಷ್ಟ್ರ ಹಿಂದೆಂದೂ ಕಂಡಿರಲಿಲ್. ಕಾಂಗ್ರೆಸ್ ಆಡಳಿತದಲ್ಲಿ, ಭ್ರಷ್ಟಾಚಾರದ ವಿಷಯದಲ್ಲಿ ಅದೇ ವೇಗ ಮತ್ತು ಪ್ರಮಾಣವು ಸಾಕ್ಷಿಯಾಗಿದೆ’ ಎಂದು ಪ್ರಧಾನಿ ಹೇಳಿದರು.

“ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ ಮತ್ತು ದ್ವೇಷವನ್ನು ಹರಡುವ ಕಾರ್ಖಾನೆಯಾಗಿದೆ. ಕಾಂಗ್ರೆಸ್‌ಗೆ ಅಭಿವೃದ್ಧಿ ಮತ್ತು ಪರಂಪರೆಯ ಬಗ್ಗೆ ಕಾಳಜಿ ಇಲ್ಲ, ನಾವು ಎರಡಕ್ಕೂ ಗಮನ ನೀಡಿದ್ದೇವೆ’ ಎಂದರು.

ಬಡವರು, ರೈತರು, ಯುವಕರು ಮತ್ತು ಮಹಿಳೆಯರ ಅಭಿವೃದ್ಧಿಯೊಂದಿಗೆ ವಿಕಸಿತ್ ಭಾರತ್ ನಮ್ಮ ಗುರಿಯಾಗಿದೆ. ಕಾಂಗ್ರೆಸ್ ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುತ್ತದೆ ಮತ್ತು ಅವರನ್ನು ತನ್ನ ಮತಬ್ಯಾಂಕ್ ಆಗಿ ಪರಿವರ್ತಿಸುತ್ತದೆ. ಹಿಂದೂಗಳನ್ನು ವಿಭಜಿಸಲು ಮತ್ತು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು ಬಯಸುತ್ತದೆ’ ಎಂದು ಮೋದಿ ಕಿಡಿ ಕಾರಿದರು.

ಮಹಾರಾಷ್ಟ್ರ ವಿಧಾನಸಭೆಗೆ ಮುಂದಿನ ತಿಂಗಳು ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಿಜೆಪಿ ಈಗಾಗಲೇ ಸಿದ್ಧತೆ ಆರಂಭಿಸಿದೆ.