ಮನೆ ರಾಜ್ಯ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುವ ವಿಶ್ವಾಸವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುವ ವಿಶ್ವಾಸವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

0

ಗೋಕಾಕ್: ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Join Our Whatsapp Group

ಅವರು ಇಂದು ಗೋಕಾಕ್ ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಪರ ಬೆಂಬಲ ನಿರೀಕ್ಷೆಗೆ ಮೀರಿ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಲಾಗುತ್ತಿದೆ. ಆದರೆ ಮೋದಿಯವರು 2014 ಹಾಗೂ 2019 ರಲ್ಲಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದರು.

ಮಣಿಪುರ ಹಿಂಸಾಚಾರದಲ್ಲಿ ಕೇಂದ್ರ ಕ್ರಮ ಕೈಗೊಂಡಿಲ್ಲ

ಮೋದಿಯವರು , ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ಸುಳ್ಳು ಹೇಳುತ್ತಿದ್ದಾರೆ. ಮಣಿಪುರದ ಹಿಂಸಾಚಾರ ಘಟನೆಯಲ್ಲಿ ಕೇಂದ್ರ ಸರ್ಕಾರ ಏನು ಕ್ರಮ ಕೈಗೊಂಡಿದೆ. 30 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿ ಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 4% ಮೀಸಲಾತಿಯನ್ನು ರದ್ದು ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಹೋದಾಗ, ಸದರಿ ಮೀಸಲಾತಿಯನ್ನು ಮೀಸಲಾತಿಯನ್ನು ಮುಂದುವರೆಸುವುದಾಗಿ ಬೊಮ್ಮಾಯಿ ಸರ್ಕಾರ ಮುಚ್ಚಳಿಕೆಯನ್ನು ಬರೆದುಕೊಟ್ಟಿತು ಎಂದರು.

ಮತಕ್ಕಾಗಿ ಸುಳ್ಳು ಹೇಳುತ್ತಿರುವ ಮೋದಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ವೇ ಮಾಡಿಸಿ, ಮಹಿಳೆಯರ ಬಂಗಾರವನ್ನೂ ಕಿತ್ತುಕೊಳ್ಳುತ್ತಾರೆ ಎಂಬ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೇವಲ ರಾಜಕಾರಣಕ್ಕಾಗಿ ಹಾಗೂ ಮತಗಳಿಗಾಗಿ ಇಂತಹ ಹಸಿ ಸುಳ್ಳುಗಳನ್ನು ಮೋದಿಯವರು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಕಳೆದ ಐದು ದಶಕಗಳಿಂದ ದೇಶದಲ್ಲಿ ಅಧಿಕಾರದಲ್ಲಿತ್ತು, ಎಂದಾದರೂ ಮಹಿಳೆಯರ ತಾಳಿಗಳನ್ನು ಕಸಿದುಕೊಂಡಿದ್ದಾರೆಯೇ?. ದೇಶದ ಜವಾಬ್ದಾರಿಯುತ ಪ್ರಧಾನಿಯಾಗಿ ಇಂತಹ ಹೇಳಿಕೆಗಳನ್ನು ಏಕೆ ನೀಡುತ್ತಿದ್ದಾರೆ. ವಿದೇಶದಿಂದ ಕಪ್ಪು ಹಣ ತಂದು ಖಾತೆಗಳಿಗೆ ಜಮೆ ಮಾಡುವ ಬಗ್ಗೆ, ರೈತರ ಆದಾಯ ದುಪ್ಪಟ್ಟು, 2 ಕೋಟಿ ಉದ್ಯೋಗ ಸೃಷ್ಟಿ, ಬೆಲೆ ಏರಿಕೆ, ಹಣದುಬ್ಬರು ಕಡಿಮೆ ಮಾಡುವ ಯಾವುದೇ ಭರವಸೆಗಳನ್ನು ಮೋದಿಯವರು ಈಡೇರಿಸಲಿಲ್ಲ ಎಂದರು.

ತನಿಖಾ ವರದಿ ನಂತರ ಕ್ರಮ

ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯಸರ್ಕಾರ ಈ ಪ್ರಕರಣದ ತನಿಖೆಗೆ ಎಸ್ ಐ ಟಿ ರಚನೆ ಮಾಡಿದ್ದು, ತನಿಖಾ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಿದ್ದರಾಮಯ್ಯ ಅವರ ಪುತ್ರನ ನಿಧನದ ಸಂದರ್ಭದಲ್ಲಿ ಬಿಜೆಪಿ ನಾಯಕರಿಂದ ದೊರೆದ ಸಹಾಯವನ್ನು ಮರೆತ್ತಿದ್ದಾರೆ ಎಂಬ ಟೀಕೆ ಕೇಳಿ ಬರುತ್ತಿರುವ ಬಗ್ಗೆ ಪ್ರಶ್ನೆಗೆ ಪ್ರತಿಕ್ರಯಿಸುತ್ತಾ, ನನ್ನ ಪುತ್ರನ ಸಾವು ವಿದೇಶದಲ್ಲಿ ಸಂಭವಿಸಿದ್ದು, ದೇಶಕ್ಕೆ ಪಾರ್ಥೀವ ಶರೀರವನ್ನು ಕರೆತರಲಾಯಿತು. ಇದರಲ್ಲಿ ನರೇಂದ್ರ ಮೋದಿ ಅಥವಾ ಇತರರ ಸಹಾಯ ನಾನು ಕೇಳಿರಲಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಹಿಂದಿನ ಲೇಖನಕಾಂಗ್ರೆಸ್ ಎಂದೆಂದಿಗೂ ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಪರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಂದಿನ ಲೇಖನಇಂದು ನೀನು ಒಲಿದೆಯಾ