ಮನೆ ರಾಜ್ಯ ಕಾಂಗ್ರೆಸ್​ ರಾಜ್ಯದ ಜನರನ್ನು ಭಿಕ್ಷುಕರಂತೆ ಕಾಣುತ್ತಿದೆ: ಸಿಎಂ ಬೊಮ್ಮಾಯಿ

ಕಾಂಗ್ರೆಸ್​ ರಾಜ್ಯದ ಜನರನ್ನು ಭಿಕ್ಷುಕರಂತೆ ಕಾಣುತ್ತಿದೆ: ಸಿಎಂ ಬೊಮ್ಮಾಯಿ

0

ಬೆಂಗಳೂರು: ಕಾಂಗ್ರೆಸ್​ ರಾಜ್ಯದ ಜನರನ್ನು ಭಿಕ್ಷುಕರಂತೆ ಕಾಣುತ್ತಿದೆ. ಚುನಾವಣೆಯಲ್ಲಿ ಜನರೇ ಅವರಿಗೆ ಬುದ್ಧಿ ಕಲಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್​ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಮಂಡ್ಯದಲ್ಲಿ ನಡೆದ ಕಾಂಗ್ರೆಸ್​ ಪ್ರಜಾಧ್ವನಿ ಯಾತ್ರೆಯಲ್ಲಿ 500 ರೂಪಾಯಿ ನೋಟುಗಳನ್ನು ಜನರ ಮೇಲೆ ತೂರಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಕಾಂಗ್ರೆಸ್​ ಎಲ್ಲವನ್ನೂ ಮಾಡುತ್ತದೆ. ಅದನ್ನು ಬೇರೆಯವರ ಮೇಲೆ ಹೊರೆಸುತ್ತಿದೆ. ಆ ಪಕ್ಷದ ಅಧ್ಯಕ್ಷರು ಕೂಡ ಅದೇ ಮಾಡುತ್ತಾರೆ. ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಜನರೇ ಇದನ್ನು ಜನರೇ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಬೂತ್​ಮಟ್ಟದಿಂದ ಪಕ್ಷವನ್ನು ಬಲಪಡಿಸಲಾಗಿದೆ. ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣಗಳಿಗೆ ನಮ್ಮ ಪಕ್ಷ ಸದಾ ಸಿದ್ಧವಾಗಿರುತ್ತದೆ. ಈ ಬಾರಿಯೂ ಅಭುತಪೂರ್ವ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದಿನ ಲೇಖನಡಿ.ತ್ರಿವೇಣಿ ಬಳ್ಳಾರಿಯ ನೂತನ ಮೇಯರ್: ರಾಜ್ಯದ ಕಿರಿಯ ಮೇಯರ್ ಹೆಗ್ಗಳಿಕೆ
ಮುಂದಿನ ಲೇಖನಸುಪ್ರೀಂ ಕೋರ್ಟ್ ವಿಚಾರಣೆಗೂ ಮುನ್ನವೇ ಲಕ್ಷದ್ವೀಪ ಸಂಸದನ ಸದಸ್ಯತ್ವ ಮರುಸ್ಥಾಪಿಸಿದ ಲೋಕಸಭಾ ಕಾರ್ಯಾಲಯ