ಮನೆ ರಾಜ್ಯ ಕಾಂಗ್ರೆಸ್, ಜೆಡಿಎಸ್‌ನಿಂದ ಮತದಾರರಿಗೆ ಆಮಿಷ: ಮೈ.ವಿ. ರವಿಶಂಕರ್ ಆರೋಪ

ಕಾಂಗ್ರೆಸ್, ಜೆಡಿಎಸ್‌ನಿಂದ ಮತದಾರರಿಗೆ ಆಮಿಷ: ಮೈ.ವಿ. ರವಿಶಂಕರ್ ಆರೋಪ

0

ಮೈಸೂರು(Mysuru): ಕಾಂಗ್ರೆಸ್ ಮತ್ತು ಜೆಡಿಎಸ್‌ ಪಕ್ಷಗಳ ಪರಿಸ್ಥಿತಿ ಶೋಚನೀಯವಾಗಿದ್ದು, ಆಸೆ–ಆಮಿಷಗಳನ್ನು ಒಡ್ಡಿ ಮತದಾರರನ್ನು ಸೆಳೆಯುವ ಪ್ರಯತ್ನವನ್ನು ನಡೆಸಿವೆ ಎಂದು ವಿಧಾನಪರಿಷತ್‌ ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್‌ ಆರೋಪಿಸಿದರು.

ಕ್ಷೇತ್ರದ ಮತದಾರರು ಪ್ರಬುದ್ಧರಾಗಿದ್ದು, ಜೆಡಿಎಸ್‌ ಹಾಗೂ ಕಾಂಗ್ರೆಸ್‌ನವರ ಆಮಿಷಗಳಿಗೆ ಬಲಿಯಾಗುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಜನಪರ ಆಡಳಿತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಕಾರಣಕ್ಕೆ ನನ್ನನ್ನು ಬೆಂಬಲಿಸುತ್ತಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್‌ನಲ್ಲಿ ಭಿನ್ನಾಭಿಪ್ರಾಯ ಕಂಡುಬಂದಿದೆ. ಆ ಪಕ್ಷದ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಜೆಡಿಎಸ್‌ ಪರವಾಗಿ ಮತ ಯಾಚಿಸುತ್ತಿಲ್ಲ. ಇದು ಬಿಜೆಪಿಗೆ ವರದಾನವಾಗಲಿದೆ’ ಎಂದರು.

ಬಿಜೆಪಿಯು ಸಂಘಟನಾತ್ಮಕವಾಗಿ ಬಲ ಹೊಂದಿಲ್ಲದಿರುವ ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಇದು ಈ ಬಾರಿ ಗೆಲುವಿನ ದಡ ಸೇರಲು ನೆರವಾಗಲಿದೆ  ಎಂದು ಕಳೆದ ಬಾರಿ ಚುನಾವಣೆಯಲ್ಲಿ ಸೋತಿದ್ದ ರವಿಶಂಕರ್‌ ಹೇಳಿದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ; ಒಳೇಟು ಬೀಳುವುದೂ ಇಲ್ಲ. ಎಲ್ಲ ನಾಯಕರೂ ನನ್ನ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಮೊದಲಾದವರು ಕೂಡ ಬಂದು ಪ್ರಚಾರ ಮಾಡಿದ್ದಾರೆ. ಹೋದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದೆ. ಹೀಗಾಗಿ ಮತದಾರರಿಗೆ ನನ್ನ ಮೇಲೆ ಅನುಕಂಪವಿದೆ  ಎಂದು ತಿಳಿಸಿದರು.

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಉಂಟಾಗಿರುವ ವಿವಾದವು ಈ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ. ಪರಿಷ್ಕರಣೆಯಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸುವುದಾಗಿ ಸರ್ಕಾರ ಈಗಾಗಲೇ ಭರವಸೆ ನೀಡಿದೆ. ಮತಯಾಚನೆಗೆ ಹೋದ ವೇಳೆ ಯಾರೊಬ್ಬರೂ ಆ ಈ ವಿಚಾರ ಪ್ರಸ್ತಾಪಿಸಿಯೇ ಇಲ್ಲ  ಎಂದು ಪ್ರತಿಕ್ರಿಯಿಸಿದರು.

ಹಿಂದಿನ ಲೇಖನಬಿಜೆಪಿ ಸರ್ಕಾರದ ಏಕಮುಖ ತೀರ್ಮಾನದಿಂದ ಯುವಕರ ಭವಿಷ್ಯ ನಾಶ:  ಹೆಚ್.ಸಿ ಮಹದೇವಪ್ಪ ವಾಗ್ದಾಳಿ.
ಮುಂದಿನ ಲೇಖನರಾಜ್ಯದಲ್ಲಿ 562 ಮಂದಿಗೆ ಕೋವಿಡ್ ಪಾಸಿಟಿವ್