ಮೈಸೂರು(Mysuru): ಗೋಕಳ್ಳರಿಗೆ ಏಟು ಬಿದ್ದರೆ ಬೊಬ್ಬೆ ಹೊಡೆಯುತ್ತಾರೆ. ಕಾಂಗ್ರೆಸ್ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಟ್ವೀಟ್ ಮಾಡಿದರೆ ನಿಮ್ಮ ಕೆಲಸ ಮುಗಿಯಿತಾ ? ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲೂ ಕಾಂಗ್ರೆಸ್ಗೆ ಅಧಿಕಾರ ಕೊಟ್ಟರೆ ಇದೇ ಪರಿಸ್ಥಿತಿ ಉಂಟಾಗುತ್ತದೆ. ಇದು ಕರ್ನಾಟಕದ ಜನರಿಗೆ ಎಚ್ಚರಿಕೆ ಗಂಟೆ ಎಂದು ಹೇಳಿದರು.
ರಾಜಸ್ಥಾನ ಸರ್ಕಾರದ ಮೇಲೆ ನನಗೆ ವಿಶ್ವಾಸವಿಲ್ಲ. ಹಿಂದುಗಳ ಧ್ವನಿ ಅಡಗಿಸಲು ಈ ಕೃತ್ಯ ನಡೆದಿದೆ. ಇದರ ಹಿಂದೆ ಕಾಂಗ್ರೆಸ್ ಇದೆ. ಕಾಂಗ್ರೆಸ್ನವರ ಮುಸ್ಲಿಂ ಓಲೈಕೆಯಿಂದ ಈ ರೀತಿ ನಡೆಯುತ್ತಿದೆ ಎಂದು ಆರೋಪಿಸಿದರು.
ಒಳ್ಳೆಯ ಮುಸ್ಲಿಮರು ಯಾಕೆ ಈಗ ಮಾತಾಡ್ತಿಲ್ಲ? ಈ ಕೊಲೆ ತಪ್ಪು ಅಂತಾ ಆರೋಪಿಗಳ ವಿರುದ್ಧ ಫತ್ವಾ ಹೊರಡಿಸಲಿ ನೋಡೋಣಾ? ಶುಕ್ರವಾರ ಪ್ರಾರ್ಥನೆಯಾದ ನಂತರ ಕಲ್ಲು ತೂರುವಂತೆ ಹೇಳುವುದು ನಿಮ್ಮ ಕೆಲಸವಾ? ಎಂದು ಕಿಡಿಕಾರಿದ್ದಾರೆ.