ಮನೆ ರಾಜಕೀಯ ಕಾಂಗ್ರೆಸ್‌ನವರು ಭಯ ಮತ್ತು ಭ್ರಮೆಯಲ್ಲಿ ಬದುಕುತ್ತಿದ್ದಾರೆ: ಪ್ರಲ್ಹಾದ ಜೋಶಿ

ಕಾಂಗ್ರೆಸ್‌ನವರು ಭಯ ಮತ್ತು ಭ್ರಮೆಯಲ್ಲಿ ಬದುಕುತ್ತಿದ್ದಾರೆ: ಪ್ರಲ್ಹಾದ ಜೋಶಿ

0

ಮೈಸೂರು(Mysuru): ಭಯ ಮತ್ತು ಭ್ರಮೆಯಲ್ಲಿ ಕಾಂಗ್ರೆಸ್‌ನವರು ಬದುಕುತ್ತಿದ್ದಾರೆ. ಕಾಂಗ್ರೆಸ್‌ನವರು ಭ್ರಮೆಯಲ್ಲಿರಲು ಮಾಧ್ಯಮದವರು ಬಿಡಿ. ಇಷ್ಟು ದಿನ ಜನರನ್ನು ಭ್ರಮೆಯಲ್ಲಿಟ್ಟಿದ್ದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ಇಂದು ನಗರದ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಜೋಶಿ, ರಾಹುಲ್ ಗಾಂಧಿ ಜೈಲಿಗೆ ಹೋಗಲು ಹೆದರುವವರಲ್ಲ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರು ತಪ್ಪು ಮಾಡಿರುತ್ತಾರೆಯೋ ಅವರಿಗೆ ಭಯ ಇರುತ್ತದೆ. ನಾನಾಗಲಿ, ಸಂಸದ ಪ್ರತಾಪ ಸಿಂಹ (ಪಕ್ಕದಲ್ಲಿದ್ದರು) ಅವರಾಗಲಿ ಭಯಪಡುತ್ತೇವೆಯೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಏನು ಮಾಡುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಮುಂದಿನ ಚುನಾವಣೆಗಳಲ್ಲಿ ಎಲ್ಲವೂ ಗೊತ್ತಾಗಲಿದೆ. ಅವರು ಎಂದಿಗೂ ದೇಶಕ್ಕಾಗಿ ವಿಚಾರ ಮಾಡಿಲ್ಲ. ನಕಲಿ ಗಾಂಧಿ ಕುಟುಂಬದವರ ಬಗ್ಗೆಯಷ್ಟೆ ಯೋಚಿಸುತ್ತಾರೆ ಎಂದು ಟೀಕಿಸಿದರು.

ಹಿಂದಿನ ಲೇಖನರೈತ ದಸರಾ: ಗಮನ ಸೆಳೆಯಲಿರುವ ಚಾರ್ಲಿ 777 ಖ್ಯಾತಿಯ ಶ್ವಾನ
ಮುಂದಿನ ಲೇಖನಮರಣ ದಂಡನೆ ಶಿಕ್ಷೆ ಮಾರ್ಗಸೂಚಿ ಪ್ರಕರಣ: ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗ