ಮನೆ ರಾಜಕೀಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಕಾಂಗ್ರೆಸ್ ಪಕ್ಷದ ನೀತಿಗಳೇ ಕಾರಣ: ಬಿಜೆಪಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಕಾಂಗ್ರೆಸ್ ಪಕ್ಷದ ನೀತಿಗಳೇ ಕಾರಣ: ಬಿಜೆಪಿ

0

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನೀತಿಗಳೇ ಕಾರಣ ಎಂದು ಬಿಜೆಪಿ ಆರೋಪಿಸಿದೆ.

Join Our Whatsapp Group

ಕಾಂಗ್ರೆಸ್ ಸರ್ಕಾರವು ಅಪರಾಧಿಗಳಿಗೆ ಶ್ರೀರಕ್ಷೆ ನೀಡಿ ಅಮಾಯಕರನ್ನು ಶಿಕ್ಷಿಸುತ್ತಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೆಲವೇ ದಿನಗಳಲ್ಲಿ ಅತಿಹೆಚ್ಚು ಅಪರಾಧ ಕೃತ್ಯಗಳು ಜರುಗಿವೆ ಎಂದು ಪತ್ರಿಕಾ ವರದಿಯ ತುಣುಕುಗಳಲ್ಲಿ ಉಲ್ಲೇಖಿಸಿರುವ ಅಂಕಿಅಂಶಗಳ ಸಮೇತ ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸರಣಿ ಸಂದೇಶಗಳ ಮೂಲಕ ಕಿಡಿ ಕಾರಿದೆ.

ಅಪರಾಧಿಗಳಿಗೆ ಶ್ರೀರಕ್ಷೆ – ಅಮಾಯಕರಿಗೆ ಶಿಕ್ಷೆ. ಇದೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ ಧ್ಯೇಯ. ರಕ್ತ ಸಿಕ್ತ “ಕೈ”ನಿಂದ ಕರ್ನಾಟಕದ ಕಾನೂನು ಸುವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಅಪರಾಧ ಕೃತ್ಯಗಳು ಜರುಗಿವೆ ಎಂದು ಬಿಜೆಪಿ ಟೀಕಿಸಿದೆ.

ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವುದಕ್ಕೆ ಗ್ಯಾರಂಟಿ ಕೊಡುವ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು ಬಿಜೆಪಿ ಉಲ್ಲೇಖಿಸಿದೆ.

ಕೇವಲ 4 ತಿಂಗಳಲ್ಲಿ 430 ಕೊಲೆಗಳು!

‘ಇದೇ ಆ ದಿನಗಳ ಗೂಂಡಾ ರಾಜ್ಯ! ಕೊಲೆ, ಸುಲಿಗೆ, ಅತ್ಯಾಚಾರ, ಗೂಂಡಾಗಿರಿ, ಭಯೋತ್ಪಾದನೆಯ ಗ್ಯಾರಂಟಿಯನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಯಾವುದೇ ಅಡೆತಡೆಗಳು ಇಲ್ಲದೆ ಜಾರಿ ಮಾಡಿದೆ. ಪರಿಣಾಮ ಕಳೆದ 4 ತಿಂಗಳಲ್ಲೇ 430 ಕೊಲೆಗಳು ನಡೆದಿವೆ. ಇನ್ನೂ ಸುಲಿಗೆ, ಅತ್ಯಾಚಾರ, ಪೋಕ್ಸೊ, ಗಲಭೆ ಇತ್ಯಾದಿಗಳ ಲೆಕ್ಕವೇ ಬೇರೆ‌. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಖುದ್ದು ಒಂದಿಷ್ಟು ಗಲಭೆಗಳನ್ನು ಸೃಷ್ಟಿಸಿದೆ. ಹನುಮ ಧ್ವಜ, ಹಿಂದೂಗಳ‌ ಮೇಲೆ ಕೇಸ್, ಹಿಂದೂಗಳ ಬಂಧನ, ರಾಮನಗರ ವಕೀಲರ ಪ್ರಕರಣಗಳಲ್ಲಿ ಸರ್ಕಾರವೇ ಕೈ ಮಿಲಾಯಿಸಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಜತೆಗೆ, ಕರ್ನಾಟಕ ಕ್ರೈಂ ಸ್ಟೇಟ್, ಇದು ಕಾಂಗ್ರೆಸ್ ಗ್ಯಾರಂಟಿ ಎಂದು ಲೇವಡಿ ಮಾಡಿದೆ. ಭಾರತದಲ್ಲಿ ಮತ್ತೊಂದು ಜಂಗಲ್ ರಾಜ್ ಉದಯವಾಗಿದೆ ಎಂದೂ ಬಿಜೆಪಿ ಕುಹಕವಾಡಿದೆ.