ಮನೆ ರಾಜಕೀಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಅ.17 ರಂದು ಭಾರತ್ ಜೋಡೋ ಯಾತ್ರೆಗೆ ಬಿಡುವು

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಅ.17 ರಂದು ಭಾರತ್ ಜೋಡೋ ಯಾತ್ರೆಗೆ ಬಿಡುವು

0

ಬೆಂಗಳೂರು(Bengaluru): ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ ೧೭ರಂದು ಚುನಾವಣೆ ನಡೆಯಲಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ ಬಿಡುವು ದೊರೆಯಲಿದೆ.
ಭಾರತ್ ಜೋಡೊ ಯಾತ್ರೆ ಸದ್ಯ ಕರ್ನಾಟಕದಲ್ಲಿ ಸಾಗುತ್ತಿದೆ. ಮತದಾನ ಮಾಡಲು ಅರ್ಹತೆ ಹೊಂದಿರುವ ೪೦ಕ್ಕೂ ಹೆಚ್ಚು ಪ್ರತಿನಿಧಿಗಳು, ಸಾವಿರಾರು ಜನರು ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಎಲ್ಲ ಅರ್ಹರಿಗೂ ಮತದಾನ ಮಾಡಲು ಯಾತ್ರೆ ಸಾಗುವ ಮಾರ್ಗದಲ್ಲಿಯೇ ಮತಗಟ್ಟೆ ತೆರೆಯಲಾಗುವುದು ಎಂದು ಮೂಲಗಳು ತಿಳಿಸಿವೆ.
ಮತದಾರರು ತಮ್ಮ ಹಕ್ಕು ಚಲಾಯಿಸಲು ಗುರುತಿನ ಚೀಟಿ ಹೊಂದಿರಬೇಕು ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಸ್ಪಷ್ಟಪಡಿಸಿದ್ದಾರೆ.

ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ, ಹಿರಿಯ ನಾಯಕ ಮಧುಸೂದನ್ ಮಿಸ್ತ್ರಿ ಅವರು ಚುನಾವಣಾ ಪ್ರಕ್ರಿಯೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಪಕ್ಷದ ಅಧ್ಯಕ್ಷೀಯ ಚುನಾವಣೆ ಕುರಿತು ಸೆ.೨೨ ರಂದು ಪ್ರಕಟಣೆ ಹೊರಡಿಸಲಾಗಿತ್ತು. ಸೆ.೨೪ ರಿಂದ ೩೦ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಅ.೧ರಂದು ನಾಮಪತ್ರಗಳ ಪರಿಶೀಲನೆ ನಡೆದಿತ್ತು. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಹಿಂಪಡೆಯಲು ಅ. ೮ರ ವರೆಗೆ ಸಮಯಾವಕಾಶವಿತ್ತು. ಅ.೧೭ರಂದು ಚುನಾವಣೆ ನಡೆಯಲಿದ್ದು, ಎರಡು ದಿನಗಳ ಬಳಿಕ (೧೯ರಂದು) ಫಲಿತಾಂಶ ಹೊರಬೀಳಲಿದೆ.

ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇರಳದ ತಿರುವನಂತಪುರ ಸಂಸದ ಶಶಿ ತರೂರ್ ಕಣದಲ್ಲಿದ್ದಾರೆ.