ಬಳ್ಳಾರಿ(Bellary): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಭಾರತ್ ಜೋಡೋ ಯಾತ್ರೆಗೆ ತಾತ್ಕಾಲಿಕ ವಿರಾಮ ನೀಡಲಾಗಿದೆ.
ಬೆಳಿಗ್ಗೆ 10 ಗಂಟೆಯಿಂದ ಮತದಾನ ಆರಂಭವಾಗಿದ್ದು, ಚುನಾವಣಾ ಕಣದಲ್ಲಿ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಪೈಪೊಟಿ ನಡೆಸುತ್ತಿದ್ದಾರೆ.
ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಳ್ಳಾರಿಯ ಸಂಗನಕಲ್ಲು ಗ್ರಾಮ ಬಳಿಯೇ ವಾಸ್ತವ್ಯ ಹೂಡಿದ್ದು, ಅಲ್ಲಿಂದಲೇ ಮತದಾನದ ಮಾಡಲಿದ್ದಾರೆ.
ಮತದಾನ ಬೇಕಾಗುವ ಎಲ್ಲ ವ್ಯವಸ್ಥೆ ಈಗಾಗಲೇ ಕಲ್ಪಿಸಲಾಗಿದೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ಬಳಿ ಇಂದು ಮತ್ತು ನಾಳೆ ವಾಸ್ತವ್ಯ ಹೂಡಿರುವ ರಾಹುಲ್ ಗಾಂಧಿ, ಎಐಸಿಸಿ ಹಾಗೂ ಕೆಪಿಸಿಸಿಯ ಸುಮಾರು 45 ಸದಸ್ಯರು ಅಲ್ಲೇ ಮತದಾನ ಹಕ್ಕು ಚಲಾಯಿಸಲಿದ್ದಾರೆ.
Saval TV on YouTube