ಮನೆ ರಾಜಕೀಯ ಪೋಸ್ಟರ್ ಅಂಟಿಸಿ, ಸೂಟ್‌’ಕೇಸ್‌’ನಲ್ಲಿ ನಕಲಿ ನೋಟು ಪ್ರದರ್ಶಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪೋಸ್ಟರ್ ಅಂಟಿಸಿ, ಸೂಟ್‌’ಕೇಸ್‌’ನಲ್ಲಿ ನಕಲಿ ನೋಟು ಪ್ರದರ್ಶಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

0

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌’ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರಾದ ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಮುಖಂಡರು, ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.ಇನ್ನು ಸೂಟ್ ಕೇಸ್ ತುಂಬ ನಕಲಿ ನೋಟುಗಳನ್ನು ಇಟ್ಟು ಪ್ರತಿಭಟನೆ ಮಾಡಲಾಯಿತು.

ಶಾಸಕ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ಪೋಸ್ಟರ್ ಅಭಿಯಾನ ಆರಂಭಿಸಲಾಗಿದೆ. ಬಿಜೆಪಿಯ ‘ರೋಲ್ ಕಾಲ್ ಮಾಡೆಲ್’ ವಿರೂಪಾಕ್ಷಪ್ಪ ಎಂದು ಬರೆದಿರುವ ಪೋಸ್ಟರ್ ಅನ್ನು ಅಂಟಿಸಲಾಯಿತು.

ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಪ್ರತಿಕ್ರಿಯಿಸಿ,‌ ರಾಜ್ಯದ ಬಿಜೆಪಿ ಸರ್ಕಾರವು ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ನಾವು ಆರಂಭದಿಂದಲೂ ಹೇಳುತ್ತಿದ್ದೆವು. ಅದು ಈಗ ಬಯಲಾಗಿದೆ. ಈ ಕೂಡಲೇ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು. ಬಿಜೆಪಿ ಅಂದರೇ ಭ್ರಷ್ಟಾಚಾರದ ಪಾರ್ಟಿ. ಪ್ರತಿ ಕೆಲಸಕ್ಕೂ ಕಮಿಷನ್ ಪಡೆಯಲಾಗುತ್ತಿದೆ ಎಂದು ದೂರಿದರು.

ಶೇ 40 ಕಮಿಷನ್‌’ಗೆ ಈ ಹಿಂದೆ ಗುತ್ತಿಗೆದಾರ ಸಂತೋಷ್ ಪಾಟೀಲ ಅವರು ಬಲಿಯಾಗಿದ್ದರು. ಪ್ರತಿ ಹಂತದಲ್ಲೂ ಲಂಚ ಪಡೆಯಲಾಗುತ್ತಿದೆ ಎಂದು ಹೇಳಿದರು.

ಹಿಂದಿನ ಲೇಖನವೈ.ಎಸ್‌.ವಿ. ದತ್ತ ಪಕ್ಷಕ್ಕೆ ದ್ರೋಹ ಮಾಡಿ ಹೋದರು: ಹೆಚ್.ಡಿ.ಕುಮಾರಸ್ವಾಮಿ
ಮುಂದಿನ ಲೇಖನಸುಳ್ಳುಸುದ್ದಿಗೆ ಸತ್ಯ ಬಲಿ, ಜನರಲ್ಲಿ ಕಡಿಮೆಯಾದ ಸಹಿಷ್ಣುತೆ: ತಂತ್ರಜ್ಞಾನದ ಅಡ್ಡಪರಿಣಾಮ ಕುರಿತು ಸಿಜೆಐ ಕಳವಳ