ರಾಮನಗರ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಹೆದ್ದಾರಿಯಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರು, ಬಿಜೆಪಿ ಸರ್ಕಾರ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.
ಹೆದ್ದಾರಿ ಪ್ರಾಧಿಕಾರವು ಸರ್ವೀಸ್ ರಸ್ತೆಗಳನ್ನು ಪೂರ್ಣಗೊಳಿಸದೆಯೇ ಟೋಲ್ ಆರಂಭಿಸಿದೆ. ಶೇಷಗಿರಿಹಳ್ಳಿ, ಹೆಜ್ಜಾಲ ಬಳಿ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಹೆಜ್ಜಾಲ ಬಳಿ ಶಾಲಾ ವಿದ್ಯಾರ್ಥಿಗಳಿಗೆ ಸ್ಕೈ ವಾಕ್ ನಿರ್ಮಿಸಿಲ್ಲ. ಹೀಗೆ ಅಪೂರ್ಣ ಕಾಮಗಾರಿ ನಡುವೆಯೇ ಹೆದ್ದಾರಿ ಟೋಲ್ ಆರಂಭಿಸಲಾಗಿದೆ ಎಂದು ದೂರಿದರು.