ಮನೆ ರಾಜ್ಯ ಮೇಕೆದಾಟು ವಿಚಾರವಾಗಿ ಕಾಂಗ್ರೆಸ್ ಸ್ಪಷ್ಟವಾಗಿ ಉತ್ತರಿಸಬೇಕು: ಬಿ.ವೈ ವಿಜಯೇಂದ್ರ

ಮೇಕೆದಾಟು ವಿಚಾರವಾಗಿ ಕಾಂಗ್ರೆಸ್ ಸ್ಪಷ್ಟವಾಗಿ ಉತ್ತರಿಸಬೇಕು: ಬಿ.ವೈ ವಿಜಯೇಂದ್ರ

0

ಬೆಂಗಳೂರು: ಮೇಕೆದಾಟು ವಿಚಾರದ ಬಗ್ಗೆ ಕಾಂಗ್ರೆಸ್ ಸ್ಪಷ್ಟವಾಗಿ ಉತ್ತರಿಸಬೇಕು. ಈಗ ಕಾಂಗ್ರೆಸ್ ಅಧಿಕಾರದಲ್ಲಿದೆ. ಅವರು ಈಗ ಸ್ಪಷ್ಟವಾಗಿ ಹೇಳಬೇಕು. ನಮ್ಮ ನಿಲುವು ಸ್ಪಷ್ಟವಾಗಿದೆ. ನಾವು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಎಲ್ಲಿಗೆ ಬಂದಿದೆ ಅಂದ್ರೆ ಚುನಾವಣೆಗೆ ಸಚಿವರನ್ನೇ ಕಣಕ್ಕಿಳಿಸಲು ನಿರ್ಧರಿಸಿದರು. ಈ ಮೂಲಕ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಕನಸು ಇತ್ತು. ಆದ್ರೆ, ಅವರಿಗೂ ಸತ್ಯಾಂಶ ಗೊತ್ತಾಗಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. BJP ಅಲೆ ಇದೆ, ಸ್ಪರ್ಧಿಸಿದ್ರೆ ಸೋಲ್ತೇವೆಂದು ಗೊತ್ತು. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸೇರಿ ನಮ್ಮ ಮೈತ್ರಿ ಅಭ್ಯರ್ಥಿಗಳನ್ನ ಗೆಲ್ಲಿಸ್ತೇವೆ ಎಂದರು.

ಎಲ್ಲವೂ ಶಾಂತಿಯುತವಾಗಲಿದೆ. ಎಲ್ಲಾ ಸಮಸ್ಯೆ ಶಮನವಾಗಲಿದೆ, ತಿಳಿಯಾಗಲಿದೆ. ಎಲ್ಲಾ 28 ಕ್ಷೇತ್ರದಲ್ಲಿ ಮೋದಿ ಪರವಾದ ಅಲೆ ಇದೆ. ಕರ್ನಾಟಕದಲ್ಲಿ ಸುಭದ್ರವಾಗಿದೆ ಅಂತ ತಿಳಿಸಬೇಕಿದೆ. ನಮ್ಮ ಮುಂದೆ ಎರಡು ಗುರಿ ಇದೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲೆಡೆ ವಿಜಯಪತಾಕೆ ಹಾರಿಸಬೇಕಿದೆ. ಮುಂದಿನ ಬಾರಿ ಸ್ಪಷ್ಟ ಬಹುಮತ ಬರಬೇಕಿದೆ. ಪಕ್ಷದ ಮುಂದಿನ ಭವಿಷ್ಯದ ದೃಷ್ಟಿಯಿಂದ ಪಕ್ಷದಿಂದ ಕೆಲಸ‌ ಆಗಬೇಕಿದೆ. ವಿಧಾನಸಭಾ ಚುನಾವಣೆಯಲ್ಲಿ ಕೂಡ ಉತ್ತಮ‌ ಗೆಲುವಾಗಬೇಕು. ಆ ನಿಟ್ಟಿನಲ್ಲಿ ಹೈಕಮಾಂಡ್ ಅಭ್ಯರ್ಥಿ ಆಯ್ಕೆ ಮಾಡಿದೆ ಎಂದು ಹೇಳಿದರು.

ಇನ್ನು 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಧ್ಯಮ ಕೇಂದ್ರ ಯಾಕೆ ಅಂತ ಪ್ರಶ್ನೆ ಬರಬಹುದು. ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಇದೆ. ಮಾಧ್ಯಮರಂಗಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆ. ನಾಲ್ಕನೆ ಅಂಗ ಅಂತಲೂ ಕರೆಸಿಕೊಂಡಿದೆ. ಬಿಜೆಪಿ ಇಂದ ಮೀಡಿಯಾ ಸೆಂಟರ್ ತೆರೆಯಲಾಗಿದೆ. ಸುದ್ದಿ ಪ್ರಸಾರ ಆಗಬೇಕು, ಅನುವು ಆಗಬೇಕು. ಎಲ್ಲಾ ಮೂಲಭೂತ ಸೌಕರ್ಯ ಇರೋ ಕೇಂದ್ರ ಉದ್ಘಾಟನೆ ಮಾಡಲಾಗಿದೆ. ರಾಷ್ಟ್ರೀಯ ನಾಯಕರು ಭೇಟಿ ನೀಡಲಿದ್ದಾರೆ. ಇಲ್ಲಿಯೇ ಎಲ್ಲಾ ಸುದ್ದಿಗೋಷ್ಟಿ ಮಾಡಲಿದ್ದಾರೆ. ಮತ್ತೊಮ್ಮೆ ಮೋದಿ ಸರ್ಕಾರ. ಇದು ಬಿಜೆಪಿ ಕಾರ್ಯಕರ್ತರ ಆಶಯ ಅಲ್ಲ. ದೇಶದ ಜವಾಬ್ದಾರಿಯುತ ನಾಗರೀಕರ ಆಶಯ. ಕೇಂದ್ರದ NDA ಸರ್ಕಾರದ ಜನಪ್ರಿಯ ಯೋಜನೆಗಳು. ಸರ್ಕಾರ ಬಂದು ಹತ್ತು ವರ್ಷಗಳಾದ್ರೂ, ಮೋದಿ ಅವರ ಜನಪ್ರಿಯತೆ ಹೆಚ್ಚಾಗಿದೆ. ಇದು ಮೊದಲ ಬಾರಿ ಈ ರೀತಿ ಆಗಿರೋದು. ದೇಶದ ಜನತೆ ಮೋದಿ ಅವರ ನಾಯಕತ್ವ ಒಪ್ಪಿದ್ದಾರೆ. ಮೋದಿ ಅವರ ಯೋಜನೆ ಮನೆಗೆ ತಲುಪುತ್ತಿದೆ ಅಂತ ಅರ್ಥ ಎಂದು ವಿಜಯೇಂದ್ರ ಹೇಳಿದರು.

ಈ ಹಿಂದೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ ಮಾಡಿದ್ದೆ. ಆಗ ಚುನಾವಣೆಯಲ್ಲಿ ನನ್ನ ಸ್ಪರ್ಧೆಗೆ ಹೈಕಮಾಂಡ್ ಒಪ್ಪಲಿಲ್ಲ. ಬೊಮ್ಮಾಯಿ ಸಿಎಂ‌ ಆಗಿದ್ದಾಗ ಎಂಎಲ್​ಸಿ ಮಾಡಲು ತೀರ್ಮಾನ ಮಾಡಿದ್ರು. ನನ್ನನ್ನು ಎಂಎಲ್​ಸಿ ಮಾಡಲು ಕೋರ್ ಕಮಿಟಿ ತೀರ್ಮಾನಿಸಿತ್ತು. ಆದರೆ, ಅದಕ್ಕೂ ನಮ್ಮ ಹೈಕಮಾಂಡ್ ಒಪ್ಪಲಿಲ್ಲ. ನಮ್ಮ ಪಕ್ಷದ ತೀರ್ಮಾನವೆಂದು ನಾನು ಆಗಲೂ ಒಪ್ಪಿಕೊಂಡೆ. ಜೆ.ಪಿ.ನಡ್ಡಾರವರು ವಿಜಯೇಂದ್ರ ಆಯ್ಕೆ ಏಕೆ ಅಂತಾ ತಿಳಿಸಿದ್ದಾರೆ. ಕುಟುಂಬ ರಾಜಕಾರಣ ಇಲ್ಲ, ಇದನ್ನು ಹೇಳಲು ಸಂಕೋಚವೂ ಇಲ್ಲ. ಯಾವುದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಬರಲು ಸಾಧ್ಯವಿಲ್ಲ. ಇದಕ್ಕೆ‌ಮೋದಿ ಅವರ ಜನಪ್ರಿಯತೆ ಕಾರಣ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಹಿಂದಿನ ಲೇಖನಬಸ್ -ಎರ್ಟಿಗಾ ಕಾರು ನಡುವೆ ಅಪಘಾತ: ಹಲವರಿಗೆ ಗಾಯ
ಮುಂದಿನ ಲೇಖನನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ, ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ