ಮನೆ ರಾಜಕೀಯ ಕಾಂಗ್ರೆಸ್​ ರಾಜ್ಯವನ್ನು ಎಟಿಎಂ ಮಾಡಬೇಕೆಂದಿದೆ: ಪ್ರಧಾನಿ ಮೋದಿ

ಕಾಂಗ್ರೆಸ್​ ರಾಜ್ಯವನ್ನು ಎಟಿಎಂ ಮಾಡಬೇಕೆಂದಿದೆ: ಪ್ರಧಾನಿ ಮೋದಿ

0

ಮುಲ್ಕಿ: ರಾಜ್ಯವನ್ನು ವಿಕಾಸ ಕ್ಷೇತ್ರದಲ್ಲಿ ನಂಬರ್​ ಒನ್​ ಮಾಡೋಣ. ಆದರೆ ಕಾಂಗ್ರೆಸ್​ಗೆ ಏನು ಬೇಕಾಗಿದೆ. ಕಾಂಗ್ರೆಸ್​ಗೆ ರಾಜ್ಯವನ್ನು ಎಟಿಎಂ ಮಾಡಬೇಕೆಂದಿದೆ. ಜೆಡಿಎಸ್​ ಕೂಡ ಕಚ್ಚೆ-ಪಂಚೆ ಪಕ್ಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್, ಜೆಡಿಎಸ್ ವಿರುದ್ಧ ಹರಿಹಾಯ್ದರು.

Join Our Whatsapp Group

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬಿಜೆಪಿ ಸಾರ್ವಜನಿಕ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದರೆ ಜನರ ಬದುಕು ಕೂಡ ಅಸ್ಥಿರವಾಗಲಿದೆ, ಹೀಗಾಗಿ ಬಿಜೆಪಿಗೆ ಬಹುಮತ ನೀಡಿ ಕರ್ನಾಟಕಕ್ಕೆ ಅಭಿವೃದ್ಧಿಪರ ಕೆಲಸ ಮಾಡುವ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರವಿರುವ ರಾಜಸ್ಥಾನದಲ್ಲಿ ಪ್ರಗತಿಯೇನು ಆಗಿಲ್ಲ, ಕರ್ನಾಟಕದಲ್ಲಿ ಕೂಡ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಸರ್ವನಾಶ ಆಗುವುದು ಖಂಡಿತ. ತುಷ್ಟೀಕರಣ ರಾಜಕಾರಣ ಕಾಂಗ್ರೆಸ್‌’ನ ಏಕೈಕ ನೀತಿಯಾಗಿದೆ. ರಾಜಸ್ಥಾನದಲ್ಲಿ ವರ್ಷಗಳ ಹಿಂದೆ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯ ಎಲ್ಲಾ ಅಪರಾಧಿಗಳನ್ನು ಆರೋಪ ಮುಕ್ತಗೊಳಿಸಲಾಯಿತು, ಕಾಂಗ್ರೆಸ್ ಶಾಂತಿಯ ವಿರೋಧಿ, ಕಾಂಗ್ರೆಸ್ ಅಭಿವೃದ್ಧಿಯ ವಿರೋಧಿ ಕಾಂಗ್ರೆಸ್ ಆತಂಕವಾದಿಗಳ ರಕ್ಷಣೆಗೆ ನಿಲ್ಲುತ್ತದೆ, ಕೇವಲ ತುಷ್ಟೀಕರಣ ಮಾಡುತ್ತದೆ ಎಂದು ಆರೋಪಿಸಿದರು.

ಪರಶುರಾಮ ಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳುಭಾಷೆ ಪ್ರಧಾನವಾಗಿರುವುದರಿಂದ ಎನ್ನ ಮೋಕೆದ ತುಳುವಪ್ಪೆ ಜೋಕುಲೇಗ್ ಸೊಲ್ಮೆಲು ಎಂದು ತುಳುವಿನಲ್ಲಿಯೇ ಪ್ರಧಾನ ಮೋದಿ ಭಾಷಣ ಆರಂಭಿಸಿದಾಗ ನೆರೆದಿದ್ದವರು ಕರತಾಡದಿಂದ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕದ ಮೊದಲ ಬಾರಿಗೆ ಮತದಾರರು ತಮ್ಮ ಭವಿಷ್ಯವನ್ನು ಮಾತ್ರವಲ್ಲದೆ ಇಡೀ ಕರ್ನಾಟಕದ ಭವಿಷ್ಯವನ್ನು ನಿರ್ಧರಿಸುವವರು ಆಗಿರುತ್ತಾರೆ. ಅವರು ಸ್ವಾತಂತ್ರ್ಯ ಮತ್ತು ಸ್ಥಿರತೆಯ ಜೀವನವನ್ನು ನಡೆಸಬೇಕಾದರೆ ಕಾಂಗ್ರೆಸ್ ನ್ನು ಅಧಿಕಾರಕ್ಕೆ ಬರಲು ಬಿಡಬಾರದು. ಡೆಲ್ಲಿಯಲ್ಲಿ ಕುಳಿತ ಒಂದು ಕುಟುಂಬ ಕರ್ನಾಟಕವನ್ನು ನಂ.1 ಎಟಿಎಂ ಮಾಡಿಕೊಳ್ಳುವುದಕ್ಕೆ ಚಿಂತನೆ ನಡೆಸಿದೆ. ಇದಕ್ಕಾಗಿ ರಾಜ್ಯ ಕಾಂಗ್ರೆಸ್‌ನವರು ಮತ ಕೇಳುತ್ತಿದ್ದಾರೆ. ಕರ್ನಾಟಕದ ಜನರು ಮತ ಹಾಕುವ ಮುನ್ನ ಯೋಚನೆ ಮಾಡಬೇಕು ಎಂದರು.

ಪ್ರತಿ ಯೋಜನೆಯಲ್ಲಿ 85% ಕಮಿಷನ್ ಪಡೆಯುವ ಕಾಂಗ್ರೆಸ್ ಕರ್ನಾಟಕದ ಅಭಿವೃದ್ಧಿಯನ್ನು ದಶಕಗಳಷ್ಟು ಹಿಂದೆ ತೆಗೆದುಕೊಂಡು ಹೋಗಿದೆ. ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಮತದಾನದ ದಿನ ದೂರವಿಲ್ಲ. ದೇಶದಲ್ಲಿ ಕರ್ನಾಟಕವನ್ನು ನಂ.1 ಮಾಡುತ್ತೇವೆ. ಇದು ಡಬಲ್‌ ಎಂಜಿನ್‌ ಸರ್ಕಾರದಿಂದ ಮಾತ್ರ ಸಾಧ್ಯ. ಕರ್ನಾಟಕಕ್ಕೆ ಮೂಲಸೌಕರ್ಯ ಒದಗಿಸುವ ಮೂಲಕ ಸೂಪರ್‌ಪವರ್‌ ರಾಜ್ಯವನ್ನಾಗಿ ಮಾಡಲಾಗುವುದು ಎಂದರು.

ವಿಶ್ವದಲ್ಲೇ ಭಾರತದ ಕೀರ್ತಿ ಹೆಚ್ಚುತ್ತಿದೆ. ಜಗತ್ತಿನಾದ್ಯಂತ ಭಾರತದ ಗೌರವ ಹೆಚ್ಚಿದೆ. ಭಾರತದ ಗೌರವ ಜಗತ್ತಿನಾದ್ಯಂತ ಹೆಚ್ಚಿದ್ದು ನಿಮ್ಮ ಮತದಾನದಿಂದ. ನಿಮ್ಮ ಮತದಿಂದ ದೆಹಲಿಯಲ್ಲಿ ಸ್ಥಿರವಾದ ಸರ್ಕಾರ ನಿರ್ಮಾಣವಾಗಿದೆ. ಹೀಗೆ ಕರ್ನಾಟಕದ ಕೀರ್ತಿ ಹೆಚ್ಚಬೇಕಾದರೇ, ದೇಶದ ವಿವಿಧ ರಾಜ್ಯಗಳಲ್ಲಿ ಕರ್ನಾಟಕದ ಜೈಕಾರ ಆಗಬೇಕೆಂದರೇ ಬಿಜೆಪಿಗೆ ಮತ ಹಾಕಿ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಕರೆ ನೀಡಿದರು.

ಹಿಂದಿನ ಲೇಖನ103ನೇ ವಯಸ್ಸಿನಲ್ಲಿ ಮತದಾನ ಮಾಡಿದ ಬೆಳಗಾವಿಯ ಮಹಾದೇವ ಮಾಲಿಂಗ ಮಾಳಿಯವರಿಗೆ ಪ್ರಧಾನಿ ಮೋದಿ ಪ್ರಶಂಸೆ
ಮುಂದಿನ ಲೇಖನರಾಜ್ಯ ವಿಧಾನಸಭೆ ಚುನಾವಣೆ: ಮೇ.10 ರಂದು ಸಾರ್ವತ್ರಿಕ ರಜೆ