ಮನೆ ರಾಜಕೀಯ ಚುನಾವಣೆ ಬಂದಂತೆ ಕಾಂಗ್ರೆಸ್’ನ ಟೂಲ್’ಕಿಟ್ ಸುದ್ದಿಗಳು ಆರಂಭವಾಗಿವೆ: ಬಿಜೆಪಿ

ಚುನಾವಣೆ ಬಂದಂತೆ ಕಾಂಗ್ರೆಸ್’ನ ಟೂಲ್’ಕಿಟ್ ಸುದ್ದಿಗಳು ಆರಂಭವಾಗಿವೆ: ಬಿಜೆಪಿ

0

ಬೆಂಗಳೂರು(Bengaluru): ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‌’ನ ಟೂಲ್‌ಕಿಟ್ ಸುದ್ದಿಗಳು ಆರಂಭವಾಗಿವೆ. ಅದರಲ್ಲಿ ಒಂದು ಪ್ರತ್ಯೇಕ ಮುಸ್ಲಿಂ ಕಾಲೇಜು ಸುದ್ದಿ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಸರ್ಕಾರದಿಂದ ಈ ಬಗ್ಗೆ ಯಾವುದೇ ಪ್ರಸ್ತಾಪವೂ ಇಲ್ಲ, ಕಾಂಗ್ರೆಸ್‌’ಗೆ ಕೆಲಸವೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು, ಹಿಜಾಬ್ ಧರಿಸಲು ಅನುಮತಿ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ‌ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು ಎಂದಿದ್ದಾರೆ.

ಹಿಂದಿನ ಲೇಖನಕೆಂಗಲ್ ಹನುಮಂತಯ್ಯ ಕರ್ನಾಟಕಕ್ಕೆ ಅಭಿವೃದ್ಧಿಯ  ನೀಲನಕ್ಷೆ ಹಾಕಿದವರು: ಸಿಎಂ ಬೊಮ್ಮಾಯಿ
ಮುಂದಿನ ಲೇಖನಚುನಾವಣೆಯನ್ನು ಅಭಿವೃದ್ಧಿ ಕೆಲಸದ ಮೇಲೆ ಎದುರಿಸುತ್ತೇವೆ: ಸಂಸದ ಪ್ರತಾಪ್ ಸಿಂಹ