ಮನೆ ಕಾನೂನು ವಯಸ್ಕರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲಾಗದು: ಹೈಕೋರ್ಟ್

ವಯಸ್ಕರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲಾಗದು: ಹೈಕೋರ್ಟ್

0

ಬೆಂಗಳೂರು: ಸುಧೀರ್ಘ ಆರು ವರ್ಷಗಳ ಕಾಲ ಪ್ರೀತಿಸಿದ ವಯಸ್ಕರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣವನ್ನು ರದ್ದುಗೊಳಿಸಿ ತೀರ್ಪು ನೀಡಿದೆ.

Join Our Whatsapp Group

ಮಾಜಿ ಪ್ರೇಯಸಿ ತನ್ನ ವಿರುದ್ಧ ಬೆಂಗಳೂರಿನ ಜೀವನ್ ಬಿಮಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಅರ್ಜಿದಾರನ ವಿರುದ್ಧದ ವಂಚನೆ, ಅತ್ಯಾಚಾರ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ದೂರು ದಾಖಲಿಸಲಾಗಿದೆ. ಆದರೆ, ಇಬ್ಬರ ನಡುವಿನ ಸಂಬಂಧ 6 ವರ್ಷಗಳದ್ದಾಗಿದ್ದು, ಪ್ರೀತಿ ಕ್ಷೀಣಿಸಿದ ಕಾರಣಕ್ಕೆ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರ ವ್ಯಾಪ್ತಿಯಲ್ಲಿ ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟು ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.