ಮನೆ ರಾಜ್ಯ ಆಟೋ ರ‍್ಯಾಲಿ ಮೂಲಕ ಸಂವಿಧಾನ ಅರಿವು, ಸಮಾನತೆಯ ಸಂದೇಶ ರವಾನೆ

ಆಟೋ ರ‍್ಯಾಲಿ ಮೂಲಕ ಸಂವಿಧಾನ ಅರಿವು, ಸಮಾನತೆಯ ಸಂದೇಶ ರವಾನೆ

0

ಮೈಸೂರು: ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದ ಈ ಸಂದರ್ಭದಲ್ಲಿ ಸಂವಿಧಾನದ ಅರಿವು ಸಮಾಜದ ಪ್ರತಿ ಪ್ರಜೆಗಳಿಗೆ ತಲುಪಿಸುವುದು ಸರ್ಕಾರದ ಆಶಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

ಇಂದು ನಗರದ ಟೌನ್ ಹಾಲ್ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆಟೋ ಚಾಲಕರಿಂದ  ಏರ್ಪಡಿಸಿದ್ದ ಆಟೋ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸoವಿಧಾನದ ಮಹತ್ವ ಹಾಗೂ ಆಶೋತ್ತರಗಳನ್ನು ಪ್ರತಿಯೊಬ್ಬರು ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನದ ಮಹತ್ವವನ್ನು ತಿಳಿಯಲು ಪೀಠಿಕೆಯನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದ ಸಂವಿಧಾನದ ಜಾಗೃತಿ ಜಾಥಾವನ್ನು ಎಲ್ಲಾ ಕಡೆ ಹಮ್ಮಿಕೊಳ್ಳಲಾಗಿದೆ. ಇಂದು ಹೆಚ್ಚು ಜನರು ಆಟೋ  ರ್ಯಾ ಲಿ ಮಾಡಿ ಸಂವಿಧಾನದ ಪೀಠಿಕೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೊದಲು ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು. ನಂತರ ಸಂವಿಧಾನ ಪೀಠಿಕೆಯನ್ನು ಬೋಧನೆ ಮಾಡಿದರು.

ಈ ಸಂದರ್ಭದಲ್ಲಿ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಜಂಟಿ ಕೃಷಿ ನಿರ್ದೇಶಕರಾದ ಚಂದ್ರ ಶೇಖರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದಿನ ಲೇಖನಇದು ಡಿಪಿಆರ್ ಬಜೆಟ್!;  ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ಮುಂದಿನ ಲೇಖನಮಾರ್ಚ್‌ ನಲ್ಲಿ “ಅಗ್ನಿಲೋಕ’ ಚಿತ್ರ ಬಿಡುಗಡೆ