ಮೈಸೂರು(Mysuru): ಮೈಸೂರಿನಲ್ಲಿ ಯುದ್ಧ ಸ್ಮಾರಕ ಆಗುತ್ತಿರುವುದು ಒಂದು ವಿಶೇಷ ಎಂದು ಕ್ಷೇತ್ರದ ವಿಧಾನಸಭಾ ಸದಸ್ಯರಾದ ನಾಗೇಂದ್ರ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮೈಸೂರು ಇವರ ಸಹಯೋಗದೊಂದಿಗೆ ಯುದ್ಧ ಸ್ಮಾರಕ ಶಂಕುಸ್ಥಾಪನೆ ಸಮಾರಂಭವನ್ನು ಇಂದು ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಮೀಪ ಹಮ್ಮಿಕೊಳ್ಳಲಾಗಿದ್ದು ಯುದ್ಧ ಸ್ಮಾರಕ ಸಂಕುಸ್ಥಾಪನೆಯನ್ನು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹಾಗೂ ಶಾಸಕ ಎಲ್ ನಾಗೇಂದ್ರ ಗುದ್ದಲಿ ಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಲ್ ನಾಗೇಂದ್ರ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುದ್ಧ ಸ್ಮಾರಕ ನಿರ್ಮಾಣ ಮಾಡುತ್ತಿರುವುದು ಸಂತಸ ತಂದಿದೆ ದೇಶ ಕಾಯುವ ಹಾಗೂ ದೇಶಕ್ಕಾಗಿ ಪ್ರಾಣ ಕೊಡುವ ಯೋಧರಿಗೆ ಸ್ಮಾರಕ ನಿರ್ಮಿಸಿ ಅವರಿಗೆ ಗೌರವ ಸಲ್ಲಿಸಬೇಕಾಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಅವರು ಮಾತನಾಡಿ ಮೈಸೂರಲ್ಲಿ ಯುದ್ಧ ಸ್ಮಾರಕ ನಿರ್ಮಾಣ ಮಾಡಬೇಕೆಂಬ 22 ವರ್ಷಗಳ ಹೋರಾಟಕ್ಕೆ ಇದೀಗ ಪ್ರತಿಫಲ ದೊರೆಯುತ್ತಿದ್ದು, ವರ್ಷದೊಳಗೆ ಜಿಲ್ಲಾಧಿಕಾರಿ ಕಚೇರಿ ಸಮೀಪದ ಪೆರೇಡ್ ಮೈದಾನದಲ್ಲಿ ಯುದ್ಧ ಸ್ಮಾರಕ ತಲೆ ಎತ್ತಲಿದೆ. ಸುಮಾರು 1.4 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯ ಪಟೇಲ್ ಪುಟ್ಟಮಾದಯ್ಯ 1 ಕೋಟಿ ರೂಪಾಯಿ ವೆಚ್ಚದ ಗ್ರೆನೇಟ್ ಶಿಲೆಯನ್ನು ನೀಡಿದ್ದಾರೆ ಈ ಸ್ಮಾರಕದಲ್ಲಿ 33 ಅಡಿ ಎತ್ತರದ ಶಿಲೆ ನಿರ್ಮಿಸಿ ಶಿಲೆಯ ಮೇಲೆ ರಾಷ್ಟ್ರ ಲಾಂಛನ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಚಾಮರಾಜನಗರ ಜಿಲ್ಲೆಯ ಶಿಲಾ ದಾನಿಗಳಾದ ಪಟೇಲ್ ಪುಟ್ಟಮಾದಯ್ಯ ಅವರು ಮಾತನಾಡಿ ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ದೇಶ ಕಾಯುವ ಯೋಧರಿಗೆ ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ವೆಚ್ಚದ ಶಿಲೆಯನ್ನು ಉಚಿತವಾಗಿ ಸ್ವ ಇಚ್ಛೆಯಿಂದ ಸಂತೋಷದಿAದ ನೀಡಿದ್ದೇನೆ ಇದು ದೇಶ ಪ್ರೇಮದ ಸಂಕೇತವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಮಹಾಪೌರರಾದ ಸುನಂದ ಪಾಲನೇತ್ರ ಅವರು,ವಿಧಾನ ಪರಿಷತ್‌ನ ಶಾಸಕರಾದ ಸಿ.ಎನ್.ಮಂಜೇಗೌಡ, ಹುಣುಸೂರು ಕ್ಷೇತ್ರದ ವಿಧಾನಸಭೆ ಶಾಸಕರಾದ ಹೆಚ್.ಪಿ.ಮಂಜುನಾಥ್, ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಹಾಗೂ ಹಲವು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.