ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹೆಸರು ಕಾಳನ್ನು ತಿನ್ನುವುದು ದೇಹಕ್ಕೆ ತುಂಬಾ ಒಳ್ಳೆಯದು. ಇದು ಅನೇಕ ರೋಗಗಳನ್ನು ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. ಅನಾರೋಗ್ಯದಿಂದ ಬಳಲುವವರಿಗೆ ಹೆಸರು ಕಾಳು ಒಂದು ಅವಶ್ಯಕ ಆಹಾರವಾಗಿದೆ ಎನ್ನಬಹುದು.
ಹೆಸರು ಕಾಳಿನಲ್ಲಿರುವ ಪೋಷಕಾಂಶಗಳು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆಯಂತೆ.
ಕೊಲೆಸ್ಟ್ರಾಲ್: ಕೆಟ್ಟ ಕೊಲೆಸ್ಟ್ರಾಲ್ ಅಪಧಮನಿಗಳಲ್ಲಿ ಶೇಖರಣೆಯಾಗುವ ಮೂಲಕ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಹೆಸರು ಕಾಳು ತಿನ್ನುವುದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ ಎಂದು ಸಂಶೋಧನೆ ಸೂಚಿಸುತ್ತದೆ.
ಮಧುಮೇಹ: ಹೆಸರು ಕಾಳು ತಿನ್ನುವುದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೆಸರು ಕಾಳಿನಲ್ಲಿ ಹೆಚ್ಚಿನ ಫೈಬರ್ ಮತ್ತು ಪ್ರೋಟೀನ್ ಇದೆ. ಇದು ರಕ್ತದಲ್ಲಿನ ಸಕ್ಕರೆಯ ಬಿಡುಗಡೆಯನ್ನು ನಿಧಾನಗೊಳಿಸುತ್ತದೆ.
ರಕ್ತದೊತ್ತಡ: ಹೆಸರು ಕಾಳಿನಲ್ಲಿರುವ ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಫೈಬರ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ದೀರ್ಘಕಾಲದ ಕಾಯಿಲೆಗಳು: ಮೊಳಕೆ ಹೊಡೆದ ಹೆಸರು ಕಾಳು ದೀರ್ಘಕಾಲದ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. ಹಾಗಾಗಿ ವೃದ್ಧರಿಗೆ ಮೆದುವಾಗಿ ಬೇಯಿಸಿದ ಹೆಸರು ಕಾಳು ತುಂಬಾನೇ ಒಳ್ಳೆಯದು.
ಹೀಟ್ ಸ್ಟ್ರೋಕ್: ಬೇಸಿಗೆ ಕಾಲದಲ್ಲಿ ಹೀಟ್ ಸ್ಟ್ರೋಕ್ ಒಂದು ಪ್ರಮುಖ ಸಮಸ್ಯೆಯಾಗಿದೆ. ಕೆಲವೊಮ್ಮೆ ಈ ಪರಿಸ್ಥಿತಿಯು ತುಂಬಾ ಗಂಭೀರವಾಗಬಹುದು. ಬೇಸಿಗೆಯಲ್ಲಿ ಹೆಸರು ಕಾಳನ್ನು ಹೆಚ್ಚಾಗಿ ತಿಂದರೆ ಶಾಖದ ಹೊಡೆತದ ಅಪಾಯವನ್ನು ಕಡಿಮೆ ಮಾಡಬಹುದು. ಇನ್ನು ಹೆಸರು ಬೇಳೆ ದೇಹದ ಉಷ್ಣಾಂಶವನ್ನು ತಗ್ಗಿಸುವ ಕೆಲಸ ಮಾಡುತ್ತದೆ.