ಮೈಸೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮೈಸೂರು ಗ್ರಾಮಾಂತರ ಹಾಗೂ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ RLHP ಸಂಯುಕ್ತಾಶ್ರಯದಲ್ಲಿ ವರುಣ ಗ್ರಾಮದಲ್ಲಿ ತಾಲೂಕು ಮಟ್ಟದ “ರಾಷ್ಟ್ರೀಯ ಪೋಷಣ್ ಮಾಸಾಚರಣೆ -2024″ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮ ಉಧ್ಘಾಟನೆ ಮಾಡಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ದಿನೇಶ್ ಬಿ.ಜಿ, ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆಯನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಪೌಷ್ಠಿಕಾಂಶದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸಲು ಈ ವಾರವನ್ನು ಮೀಸಲಿಡಲಾಗಿದೆ. ಈ ವರ್ಷದ ಧ್ಯೇಯ ವಾಕ್ಯ “ಸುಪೋಷಿತ ಕಿಶೋರಿ, ಸಶಕ್ತ ನಾರಿ” ಇದು ಕಿಶೋರಿಯರ ಆರೋಗ್ಯದ ಮಹತ್ವವನ್ನು ತಿಳಿಸುತ್ತದೆ ಎಂದರು.
ಜೀವನದ ಪ್ರತಿಯೊಂದು ಹಂತದಲ್ಲೂ ವ್ಯಕ್ತಿಗಳ ಪೌಷ್ಟಿಕಾಂಶದ ಬೇಡಿಕೆಗಳನ್ನು ಪೂರೈಸುವ ಆಹಾರಕ್ರಮವನ್ನು ಉತ್ತೇಜಿಸುವುದು ಈ ಅಭಿಯಾನದ ಮುಖ್ಯ ಗುರಿಯಾಗಿದೆ. ಸಮತೋಲಿತ ಆಹಾರವನ್ನು ಸೇವಿಸಬೇಕಿದೆ ನಿಮ್ಮ ಆಹಾರದಲ್ಲಿ ಹೆಚ್ಚಿನ ಧಾನ್ಯಗಳು, ಕಾಳುಗಳು, ಹಣ್ಣುಗಳು, ತರಕಾರಿಗಳು, ಬೀಜಗಳನ್ನು ಸೇರಿಸಿ. ಜಂಕ್‌ಫುಡ್ ಳಿಂದ ದೂರ ಉಳಿಯಿರಿ. ನಾವು ಸಮತೋಲನ ಆಹಾರ ಸೇವಿಸದಿದ್ದರೆ ಅಪೌಷ್ಠಿಕತೆ ಉಂಟಾಗುತ್ತದೆ. ಮನೆಯಲ್ಲಿರುವ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಬಳಸಿರಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೊದಲ ಗರ್ಬಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನಪ್ರಾಶ, ತೊಟ್ಟಿಲು ಶಾಸ್ತ್ರ ಮತ್ತು ಅಕ್ಷರಬ್ಯಾಸವನ್ನು ಮಾಡಿಸಲಾಯಿತು.
ಗ್ರಾಮಾಂತರ ಎಂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಬ್ಬಯ್ಯ ಕಾರ್ಯಕ್ರಮದ ಹಿನ್ನೆಲೆಯ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರು ಲತಾ, ವರುಣ ಗ್ರಾಮ ಪಂಚಾಯಿತಿ ಸದಸ್ಯೆ ಸುಧಾ, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳು ಡಾ. ಪ್ರಸಾದ್, ಆರ್.ಎಲ್.ಹೆಚ್.ಪಿ ಸಂಸ್ಥೆ ಸಂಯೋಜಕರು ಶಶಿಕುಮಾರ್, ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಹಿರಿಯ ಮೇಲ್ವಿಚಾರಕರು, ಮೇಲ್ವಿಚಾರಕರು, ಪೋಷಣ ಅಭಿಯಾನ ಸಂಯೋಜಕರು, ಗರ್ಭಿಣಿಯರು ಬಾಣಂತಿಯರು, ಮಹಿಳೆಯರು ಮತ್ತು ಮಕ್ಕಳು ಉಪಸ್ಥಿತರಿದ್ದರು.