ಮಂಗಳೂರು: ಕಲುಷಿತ ನೀರು ಸೇವಿಸಿ ಖಾಸಗಿ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ರವಿವಾರ ಸಂಜೆ ನಡೆದಿದೆ.
ಹಾಸ್ಟೆಲ್ ನಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿನಿಯರಿಗೆ ವಾಂತಿ ಭೇದಿ ಉಂಟಾಗಿದೆ. ಯಾರನ್ನೂ ಆಸ್ಪತ್ರೆಗೆ ದಾಖಲಿಸಿಲ್ಲ. ಈಗ ಎಲ್ಲರೂ ಚೇತರಿಸಿಕೊಂಡಿದ್ದಾರೆ.
ಅಹಾರ ಮತ್ತು ನೀರಿನ ಮಾದರಿಯನ್ನು ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.