ಮನೆ ರಾಜ್ಯ ಏಕರೂಪ ನಾಗರಿಕ ಸಂಹಿತೆಯ ಜಾರಿಗೆ ಚಿಂತನೆ: ಸಿಎಂ ಬೊಮ್ಮಾಯಿ

ಏಕರೂಪ ನಾಗರಿಕ ಸಂಹಿತೆಯ ಜಾರಿಗೆ ಚಿಂತನೆ: ಸಿಎಂ ಬೊಮ್ಮಾಯಿ

0

ಬೆಂಗಳೂರು: ಏಕರೂಪ ನಾಗರಿಕ ಸಂಹಿತೆಯ ಜಾರಿಯ ಅಗತ್ಯ ಇದ್ದು, ಎಲ್ಲಾ ಆಯಾಮಗಳನ್ನು ಅಧ್ಯಯನ ಮಾಡಿ ಈ ಬಗ್ಗೆ ನಿರ್ಧಾರಕ್ಕೆ ಬರುತ್ತೇವೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸ್ಪಷ್ಟಪಡಿಸಿದರು.

ವಿಧಾನಸೌಧದ ಎದುರಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಕೇಂದ್ರದ ಬಿಜೆಪಿಯ ಪ್ರಣಾಳಿಕೆಯಲ್ಲೂ ಪ್ರಸ್ತಾಪಿಸಲಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಇದರ ಜಾರಿ ಬಗ್ಗೆ ಸಮಿತಿ ರಚಿಸಲಾಗಿದೆ. ಈ ಕುರಿತು ಗಂಭೀರ ಚಿಂತನೆ ಮಾಡಿ ಒಂದು ನಿರ್ಧಾರಕ್ಕೆ ಬರುತ್ತೇವೆ ಎಂದರು.

ಕರ್ನಾಟಕದ ಬಸ್​​ಗಳಿಗೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ ವಿಚಾರವಾಗಿ ಪ್ರತಿಕ್ರಿಯಿಸುತ್ತ, ನಾನು ಈಗಾಗಲೇ‌ ಮಹಾರಾಷ್ಟ್ರ ಸರ್ಕಾರದ ಜತೆ ಮಾತಾಡಿದ್ದೇನೆ. ಇಂದು ಗೃಹ ಸಚಿವರು ಮತ್ತು ಡಿಜಿ‌ ಐಜಿಪಿ ಅಲ್ಲಿನವರ ಜತೆ ಮಾತನಾಡುತ್ತಾರೆ. ನಮ್ಮ ಬಸ್​​ಗಳಿಗೆ ಯಾವುದೇ ಹಾನಿ ಮಾಡಬಾರದು ಎಂದು ತಿಳಿಸಿದ್ದೇವೆ. ಎರಡೂ ರಾಜ್ಯಗಳ ನಡುವೆ ಶಾಂತಿ ಸೌಹಾರ್ದತೆ ಕಾಪಾಡಲು ಹೇಳಿದ್ದೇವೆ ಎಂದರು.

ಚಿಲುಮೆ ಪ್ರಕರಣದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ವಿಚಾರವಾಗಿ ಮಾತನಾಡಿದ ಸಿಎಂ, ಪ್ರಕರಣದ ಮುಕ್ತ ತನಿಖೆ ಮಾಡಿಸಲು ಸರ್ಕಾರ ಮುಕ್ತವಾಗಿದೆ. ಹೀಗಾಗಿಯೇ ನಾವು ತನಿಖೆಗೆ ಕೊಟ್ಟಿರುವುದು. ಹಲವಾರು ಜನರ ಬಂಧನ ಕೂಡ ಆಗಿದೆ. ಚುನಾವಣಾ ಆಯೋಗದ ತನಿಖೆಯನ್ನು ಸ್ವಾಗತಿಸುತ್ತೇವೆ ಎಂದು ತಿಳಿಸಿದರು.

ಅಧಿಕಾರಿಗಳ ವಿರುದ್ಧ ತಪ್ಪು ಸಾಬೀತಾದರೆ ಕ್ರಮ ತೆಗೆದುಕ್ಕೊಳ್ಳುತ್ತೇವೆ. ಚುನಾವಣಾ ಆಯೋಗ ರದ್ದಾದ ವೋಟರ್ ಕಾರ್ಡ್​ಗಳ ಪರಿಷ್ಕರಣೆ ಮಾಡುತ್ತಿದೆ. ಅನ್ಯಾಯವಾಗಿ ರದ್ದಾಗಿದ್ದರೆ, ಸರಿಪಡಿಸಲಾಗುತ್ತದೆ. ಎರಡು ಕಡೆ ವೋಟರ್ ಕಾರ್ಡ್ ಇದ್ದರೆ ರದ್ದು ಮಾಡಲಾಗುತ್ತದೆ ಎಂದು ಸಿಎಂ ತಿಳಿಸಿದರು.

ಹಿಂದಿನ ಲೇಖನಅನಗತ್ಯ, ಕ್ಷುಲ್ಲಕ ವ್ಯಾಜ್ಯ ನಿಯಂತ್ರಿಸದಿದ್ದರೆ ದಂಡ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ
ಮುಂದಿನ ಲೇಖನನಟ ಚೇತನ್ ವಿರುದ್ಧದ ಎಫ್’ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ