ಮನೆ ರಾಜಕೀಯ ಈಶ್ವರಪ್ಪರನ್ನು ವಜಾಗೊಳಿಸದಿದ್ದರೆ ಸದನದಲ್ಲಿ ಪ್ರತಿಭಟನೆ ಮುಂದುವರಿಕೆ: ಸಿದ್ದರಾಮಯ್ಯ

ಈಶ್ವರಪ್ಪರನ್ನು ವಜಾಗೊಳಿಸದಿದ್ದರೆ ಸದನದಲ್ಲಿ ಪ್ರತಿಭಟನೆ ಮುಂದುವರಿಕೆ: ಸಿದ್ದರಾಮಯ್ಯ

0

ಬೆಂಗಳೂರುಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ  ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆ.ಎಸ್.ಈಶ್ವರಪ್ಪ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಟ್ವಿಟ್ಟರ್ ಪೋಸ್ಟ್ ಮಾಡಿರುವ ಅವರು, “ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿರುವ ಗ್ರಾಮೀಣ ಅಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಗುರುವಾರ 11 ಗಂಟೆಯೊಳಗೆ ವಜಾಮಾಡದೆ ಇದ್ದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಹಿಂದಿನ ಲೇಖನಬೀದರ್‌ನ ಉಗ್ರ ನರಸಿಂಹ ದೇಗುಲಕ್ಕೆ ನಾಲ್ಕು ವರ್ಷಗಳ ಬಳಿಕ ಭಕ್ತರ ಪ್ರವೇಶಕ್ಕೆ ಅವಕಾಶ
ಮುಂದಿನ ಲೇಖನಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ ಬಜೆಟ್ ನಲ್ಲಿ 1000 ಕೋಟಿ ಅನುದಾನ