ಮನೆ ರಾಜ್ಯ ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಗಳನ್ನೇ ಮುಂದುವರಿಸಿ: ಹೆಚ್.ಡಿ. ದೇವೇಗೌಡರಿಂದ ಸಿಎಂಗೆ ಪತ್ರ

ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಗಳನ್ನೇ ಮುಂದುವರಿಸಿ: ಹೆಚ್.ಡಿ. ದೇವೇಗೌಡರಿಂದ ಸಿಎಂಗೆ ಪತ್ರ

0

ಬೆಂಗಳೂರು(Bengaluru): ಪುನರ್ ಪರಿಷ್ಕರಣೆಯ ಪಠ್ಯ ಪುಸ್ತಕಗಳನ್ನು ವಾಪಾಸ್ ಪಡೆದು, ಹಿಂದೆ ಇದ್ದಂತಹ ಬರಗೂರು ರಾಮಚಂದ್ರಪ್ಪನವರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷವೂ ಮುಂದುವರೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ರ ಬರೆದಿದ್ದಾರೆ.

ಪಠ್ಯಪುಸ್ತಕಗಳಲ್ಲಿ ಅಲ್ಪಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಪ್ಪೋಲೆ ಅಥವಾ ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಹಿಂದೆ ಇದ್ದಂತಹ ಪಠ್ಯಪುಸ್ತಕವನ್ನೇ ಮುಂದುವರೆಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.

ಮುಂದುವರಿದು ಈಗ ತಮಗೆ ಕಳುಹಿಸುತ್ತಿರುವ ವಿಶ್ವಮಾನವ ಕುವೆಂಪು ಹೋರಾಟ ಸಮಿತಿಯ ಹಕ್ಕೊತ್ತಾಯ ಪತ್ರದ ಅಂಶಗಳನ್ನು ನಾನು ಕೂಡ ಬೆಂಬಲಿಸುತ್ತಾ. ಈ ವಿಷಯವಾಗಿ ಕೂಡಲೇ ಕ್ರಮಕೈಗೊಳ್ಳಬೇಕೆಂದು ಆಶಿಸುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.